ಲಾರಿ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿ, ನಡು ರಸ್ತೆಯಲ್ಲೇ ಹೊತ್ತಿ ಉರಿದ ವಾಹನಗಳು…

249
firstsuddi

ಬೆಳಗಾವಿ : ಲಾರಿ ಹಾಗೂ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಎರಡು ವಾಹನಗಳಿಗೂ ಬೆಂಕಿ ಹೊತ್ತಿಕೊಂಡಿರುವ ಘಟನೆ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಾಲಮಣಿ ಗ್ರಾಮದಲ್ಲಿ ನಡೆದಿದೆ. ಗೋವಾದಿಂದ ಬೆಳಗಾವಿ ಕಡೆಗೆ ತೆರಳುತ್ತಿದ್ದ ಬಸ್ ಹಾಗೂ ಬೆಳಗಾವಿಯಿಂದ ಗೋವಾ ಕಡೆಗೆ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಲಾರಿ ಡೀಸೆಲ್ ಟ್ಯಾಂಕ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಎರಡೂ ವಾಹನಕ್ಕೂ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಬಸ್‍ನಲ್ಲಿದ್ದ 21ಪ್ರಯಾಣಿಕರು ಹಾಗೂ ಲಾರಿ ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾನಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.