ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ, ನಾಲ್ವರು ಸ್ಥಳದಲ್ಲೇ ಸಾವು…

196
firstsuddi

ಮೈಸೂರು : ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೈಸೂರು-ಟಿ. ನರಸೀಪುರ ಹೆದ್ದಾರಿ ಬಳಿ ನಡೆದಿದೆ. ಕಂಚಮಳ್ಳಿ ನಿವಾಸಿ ಮಧುಕುಮಾರ್, ಒಡಿಶಾ ಮೂಲದ ಅಹಮ್ಮದ್ ಖಾನ್ , ನಂಜನಗೂಡು ತಾಲೂಕಿನ ಹುರಾ ಗ್ರಾಮದ ಮಧು, ಹೆಚ್.ಡಿ.ಕೋಟೆ ತಾಲೂಕಿನ ಕಂದೇಗಾಲ ನಿವಾಸಿ ರಾಘವೇಂದ್ರ ಮೃತ ದುರ್ಧೈವಿಗಳು ಎನ್ನಲಾಗಿದ್ದು, ಸ್ನೇಹಿತನ ಮನೆಗೆ ಹಬ್ಬಕ್ಕೆಂದು ತೆರಳಿದ ಸಹೋದ್ಯೋಗಿಗಳು ವಾಪಸ್ಸಾಗುವಾಗ ಮೈಸೂರಿನಿಂದ ಬರುತ್ತಿತ್ತ ಲಾರಿಗೆ 2 ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟಿ. ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.