ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ; ಸರ್ಕಾರಕ್ಕೆ ಬಿಗ್ ರಿಲೀಫ್…

50
firstsuddi

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು ತೆರವುಗೊಳಿಸಿದ್ದು, ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕೆಂದು ಡಿ.ಜಿ.ರಾಘವೇಂದ್ರ ಎಂಬುವರು ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು.

ಈ ಸಂಬಂಧ ಇಂದು ಮತ್ತೆ ವಿಚಾರಣೆ ನಡೆಸಿದಾಗ, 2ಎ ಮೀಸಲಾತಿಯಲ್ಲಿ ಪರಿವರ್ತನೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಭರವಸೆ ನೀಡಿದ್ದರಿಂದ ಮಧ್ಯಂತರ ಆದೇಶವನ್ನು ರದ್ದುಗೊಳಿಸಿದೆ. ಹೀಗಾಗಿ ಪಂಚಮಸಾಲಿ ಸಮುದಾಯಕ್ಕೆ 2ಸಿ, 2ಡಿ ಮೀಸಲಾತಿ ನೀಡಲು ಯಾವುದೇ ಅಡ್ಡಿ ಇಲ್ಲ.