ಲಿಪ್ ಲಾಕ್ ಮಾಡಿಕೊಂಡ ರಾಘವ್ ಚಡ್ಡಾ – ಪರಿಣಿತಿ ಚೋಪ್ರಾ.

52
firstsuddi

ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಇತ್ತೀಚೆಗೆ ದೆಹಲಿಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ನಿಶ್ಚಿತಾರ್ಥದ ದಿನ ಪರಿಣಿತಿ ಹಾಗೂ ರಾಘವ್ ಲಿಪ್ ಲಾಕ್ ಮಾಡಿಕೊಂಡ ವಿಡಿಯೋ ಸಖತ್ ವೈರಲ್ ಆಗಿದೆ.

ಈ ಜೋಡಿಯ ನಿಶ್ಚಿತಾರ್ಥ ಸಮಾರಂಭದಲ್ಲಿ ರಾಜಕೀಯ ಗಣ್ಯರು, ಸಿನಿ ತಾರೆಯರು ಹಾಗೂ ಕ್ರೀಡಾಪಟುಗಳು ಭಾಗಿಯಾಗಿದ್ದರು. ಪರಿಣಿತಿ ಸಹೋದರಿ ಪ್ರಿಯಾಂಕಾ ಚೋಪ್ರಾ, ಮನೀಶ್ ಮಲ್ಹೋತ್ರಾ ಸೇರಿದಂತೆ ಹಲವರು ಇಡೀ ಸಮಾರಂಭದಲ್ಲಿ ಮಿಂಚಿದ್ದಾರೆ. ದೆಹಲಿಯ ಇಂಡಿಯಾ ಗೇಟ್ ಬಳಿಯ ಕಪುರ್ತಲ ಹೌಸ್ ನಲ್ಲಿ ಪರಿಣಿತಿ ಚೋಪ್ರಾ ಹಾಗೂ ರಾಘವ್ ಉಂಗುರ ಬದಲಾಯಿಸಿಕೊಂಡಿದ್ದಾರೆ.

ರಾಘವ್ ಚಡ್ಡಾ ಆಪ್ ಪಕ್ಷದಿಂದ ಎಂಪಿ ಆಗಿದ್ದರೆ, ಪರಿಣಿತಿ ಲೇಡಿಸ್ ವರ್ಸಸ್ ರಿಕ್ಕಿ ಬೇಲ್ ಮೂಲಕ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟು ಈಗಲೂ ಸಿನಿಮಾ ರಂಗದಲ್ಲೇ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ರಾಜಕೀಯಕ್ಕೂ ಬಣ್ಣದ ಲೋಕಕ್ಕೂ ಉತ್ತಮ ನಂಟಿದೆ. ಅನೇಕರು ಸಿನಿಮಾದಿಂದ ರಾಜಕೀಯಕ್ಕೆ ಕಾಲಿಟ್ಟಿದ್ದಾರೆ. ಈಗ ಪರಿಣಿತಿ ಅವರು ರಾಜಕಾರಣಿಯನ್ನೇ ಮದುವೆ ಆಗುತ್ತಿದ್ದಾರೆ. ರಾಘವ್ ಚಡ್ಡಾ ಮತ್ತು ಪರಿಣಿತಿ ಚೋಪ್ರಾ ಅವರು ಅಕ್ಟೋಬರ್​ನಲ್ಲಿ ಮದುವೆ ಆಗಲಿದ್ದಾರೆ ಎನ್ನಲಾಗಿದೆ.