ಲಿಫ್ಟ್ ಗುಂಡಿಗೆ ಬಿದ್ದು 2 ವರ್ಷದ ಮಗು ಸಾವು…

119
firstsuddi

ಬೆಂಗಳೂರು : ನಿರ್ಮಾಣ ಹಂತದ ಕಟ್ಟದ ಲಿಫ್ಟ್ ಗುಂಡಿಯೊಳಗೆ ಬಿದ್ದು 2 ವರ್ಷದ ಮಗು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೋಡಿಪಾಳ್ಯದಲ್ಲಿ ನಡೆದಿದೆ. ಮೃತ ಮಗುವನ್ನು ಉತ್ತರ ಕರ್ನಾಟಕ ಮೂಲದ ದಂಪತಿಯ ಪುತ್ರ ವಿನೋದ(2) ಎಂದು ಗುರುತಿಸಲಾಗಿದೆ. ಮೃತ ಮಗು ರಮೇಶ್ ಎಂಬುವವರಿಗೆ ಸೇರಿದ ಕಟ್ಟಡದ ಬಳಿ ಆಟವಾಡುತ್ತಿದ್ದ. ಈ ವೇಳೆ ಮಗು ಆಟವಾಡುತ್ತಾ ಆಯತಪ್ಪಿ ಲಿಫ್ಟ್ ಅಳವಡಿಸಲು ತೆಗೆದಿದ್ದ 6 ಅಡಿ ಗುಂಡಿಗೆ ಬಿದ್ದಿದ್ದು, ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಮಗುವನ್ನು ಕೂಡಲೇ ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿದ್ದು, ಈ ಕುರಿತು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.