ಲೇಟ್ ನೈಟ್ ಪಾರ್ಟಿ ಕೇಸ್: ನಟ ದರ್ಶನ್ ಸೇರಿ 8 ಮಂದಿಗೆ ಬಿಗ್ ರಿಲೀಫ್…

53
firstsuddi

ಬೆಂಗಳೂರು: ಜೆಟ್‌ಲ್ಯಾಗ್‌ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಎಲ್ಲರಿಗೂ ಬಿಗ್ ರಿಲೀಫ್ ಸಿಕ್ಕಿದೆ.

ಜೆಟ್‌ಲ್ಯಾಗ್‌ ಪಬ್‌ನಲ್ಲಿ ಅವಧಿ ಮೀರಿ ಪಾರ್ಟಿ ಮಾಡಲಾಗಿದೆ ಎಂದು ಆರೋಪಿಸಿ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಈಗ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ. ತಡ ರಾತ್ರಿ ಪಾರ್ಟಿ ಮಾಡಿಲ್ಲ. ಆರೋಪಿಗಳು ಊಟದ ಪಾರ್ಟಿ ಮಾಡಿದ್ದರು ಎಂದು ಪೊಲೀಸರು ​ನಲ್ಲಿ ಉಲ್ಲೇಖಿಸಿದ್ದಾರೆ.

ಕೆಲ ತಿಂಗಳ ಹಿಂದೆ ದರ್ಶನ್ ಹಾಗೂ ತಂಡ ಜೆಟ್​ಲ್ಯಾಗ್​ನಲ್ಲಿ ಪಾರ್ಟಿ ಮಾಡಿದ ಆರೋಪ ಎದುರಾಗಿತ್ತು. ಈ ಪ್ರಕರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಆ ಬಳಿಕ ಪೊಲೀಸರು ನೋಟಿಸ್ ಕೊಟ್ಟ ಹಿನ್ನೆಲೆಯಲ್ಲಿ ದರ್ಶನ್, ರಾಕ್​ಲೈನ್ ವೆಂಕಟೇಶ್, ಅಭಿಷೇಕ್ ಅಂಬರೀಷ್ ಮೊದಲಾದವರು ಪೊಲೀಸ್ ಠಾಣೆಗೆ ಬಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯಲ್ಲಿ ‘ಊಟ ಮಾಡಿದ್ದೇವೆ ಅಷ್ಟೆ, ಪಾರ್ಟಿ ಮಾಡಿಲ್ಲ’ ಎಂದಿದ್ದರು. ಈ ಹೇಳಿಕೆಯನ್ನು ಪೊಲೀಸರು ಪರಿಗಣನೆಗೆ ತೆಗೆದುಕೊಂಡಿದ್ದಾರೆ.

ಓವರ್ ನೈಟ್ ಪಾರ್ಟಿ ಆಗಿರಲಿಲ್ಲ. ಊಟದ ಪಾರ್ಟಿ ಎಂದು ಚಾರ್ಜ್​ಶೀಟ್​ನಲ್ಲಿ ಉಲ್ಲೇಖ ಆಗಿದೆ. ನಟ ದರ್ಶನ್, ರಾಕ್​ಲೈನ್ ಸೇರಿ ಹಲವರು ಪಾರ್ಟಿ ಮಾಡಿದ್ದ ಆರೋಪ ಇತ್ತು. ಈಗ ಚಾರ್ಜ್​ಶೀಟ್​ನಲ್ಲಿ ಮಾಡಲಾದ ಉಲ್ಲೇಖದಿಂದ ಎಲ್ಲರೂ ನಿಟ್ಟುಸಿರು ಬಿಡುವಂತೆ ಆಗಿದೆ.
ಕೇಸ್ ಸಂಬಂಧ ದರ್ಶನ್ ಸೇರಿ 8 ನಟರಿಗೆ ನೋಟಿಸ್ ನೀಡಲಾಗಿತ್ತು. 8 ಜನರು ವಿಚಾರಣೆಗೆ ಹಾಜರಾಗಿ ನಾವು ಪಾರ್ಟಿ ಮಾಡಿಲ್ಲ. ಕೇವಲ ಊಟ ಮಾತ್ರ ಮಾಡಿದ್ದೇವೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಆಧಾರಿಸಿ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ.