ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿ 2ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಒಟ್ಟು 28 ಕ್ಷೇತ್ರಗಳಲ್ಲಿ ಮೂರು ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟುಕೊಟ್ಟಿದ್ದು, ಇನ್ನುಳಿದ 25 ಕ್ಷೇತ್ರಗಳ ಪೈಕಿ ಈಗ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗಿದೆ.
ರಾಯಚೂರು, ಚಿತ್ರದುರ್ಗ, ಬೆಳಗಾವಿ, ಚಿಕ್ಕಬಳ್ಳಾಪುರ, ಉತ್ತರ ಕನ್ನಡ ಕ್ಷೇತ್ರಗಳ ಟಿಕೆಟ್ ಕಾಯ್ದಿರಿಸಿದೆ. ಯಾರು ನಾಯಕರಾಗುತ್ತಾರೆ ಎಂಬ ಬಗ್ಗೆ ತೀರ್ಮಾನ ಮಾಡಲಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿ ಟಿಕೆಟ್‌ಗಳ ಕ್ಷೇತ್ರವನ್ನು ಬಾಕಿ ಉಳಿಸಿಕೊಳ್ಳಲಾಗಿದೆ. ಪ್ರಮುಖವಾಗಿ ತುಮಕೂರು ಕ್ಷೇತ್ರದಿಂದ ವಿ. ಸೋಮಣ್ಣ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 2ನೇ ಪಟ್ಟಿಯಲ್ಲಿ ಲೋಕಸಭೆಗೆ ಒಟ್ಟು 72 ಕ್ಷೇತ್ರಗಳಿಗೆ ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ.
ಯಾರ್ಯಾರಿಗೆ ಟಿಕೆಟ್?:-
ಬಿಜಾಪುರ- ರಮೇಶ್ ಜಿಗಜಿಣಗಿ
ಚಿಕ್ಕೋಡಿ- ಅಣ್ಣಾ ಸಾಹೇಬ್ ಜೊಲ್ಲೆ
ಬಾಗಲಕೋಟೆ- ಪಿ.ಸಿ. ಗದ್ದಿಗೌಡರ
ಕಲಬುರಗಿ- ಉಮೇಶ್ ಜಾಧವ್
ಬೀದರ್- ಭಗವಂತ ಖೂಬಾ
ಕೊಪ್ಪಳ- ಡಾ. ಬಸವರಾಜ ಕ್ಯಾವತೋರ್
ಬಳ್ಳಾರಿ- ಶ್ರೀರಾಮುಲು
ಹಾವೇರಿ- ಬಸವರಾಜ ಬೊಮ್ಮಾಯಿ
ಧಾರವಾಡ- ಪ್ರಹ್ಲಾದ್ ಜೋಶಿ
ದಾವಣಗೆರೆ- ಗಾಯತ್ರಿ ಸಿದ್ದೇಶ್ವರ
ಶಿವಮೊಗ್ಗ- ಬಿ.ವೈ. ರಾಘವೇಂದ್ರ
ಉಡುಪಿ-ಚಿಕ್ಕಮಗಳೂರು- ಕೋಟಾ ಶ್ರೀನಿವಾಸ ಪೂಜಾರಿ
ದಕ್ಷಿಣ ಕನ್ನಡ – ಕ್ಯಾ.ಬ್ರಿಜೇಶ್ ಚೌಟಾ
ತುಮಕೂರು – ವಿ. ಸೋಮಣ್ಣ
ಮೈಸೂರು- ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್
ಚಾಮರಾಜನಗರ- ಎಸ್. ಬಸವರಾಜು
ಬೆಂಗಳೂರು ಗ್ರಾಮಾಂತರ- ಡಾ.ಸಿ.ಎನ್. ಮಂಜುನಾಥ್
ಬೆಂಗಳೂರು ಉತ್ತರ- ಶೋಭಾ ಕರಂದ್ಲಾಜೆ
ಬೆಂಗಳೂರು ಕೇಂದ್ರ – ಪಿ.ಸಿ. ಮೋಹನ್
ಬೆಂಗಳೂರು ದಕ್ಷಿಣ- ತೇಜಸ್ವಿ ಸೂರ್ಯ
ಜೆಡಿಎಸ್ಗೆ ಬಿಟ್ಟುಕೊಟ್ಟ ಮೂರು ಕ್ಷೇತ್ರಗಳು:-
• ಮಂಡ್ಯ
• ಹಾಸನ
• ಕೋಲಾರ
8 ಹಾಲಿ ಸಂಸದರಿಗೆ ಟಿಕೆಟ್ ಮಿಸ್:-
ಕರ್ನಾಟಕ ಬಿಜೆಪಿಯ ಒಟ್ಟು 8 ಹಾಲಿ ಸದಸ್ಯರಿಗೆ ಈ ಬಾರಿ ಟಿಕೆಟ್ ತಪ್ಪಿದೆ. ಮೈಸೂರು-ಪ್ರತಾಪ್ ಸಿಂಹ, ಬೆಂಗಳೂರು ಉತ್ತರ- ಡಿವಿ ಸದಾನಂದ ಗೌಡ, ಕೊಪ್ಪಳ- ಕರಡಿ ಸಂಗಣ್ಣ, ಹಾವೇರಿ-ಶಿವಕುಮಾರ್ ಉದಾಸಿ, ತುಮಕೂರು-ಜಿಎಸ್ ಬಸವರಾಜು(ನಿವೃತ್ತಿ ಘೋಷಿಸಿದ್ದರು) ದಕ್ಷಿಣ ಕನ್ನಡ-ನಳಿನ್ ಕುಮಾರ್ ಕಟೀಲ್, ಚಾಮರಾಜನಗರ-ಶ್ರೀನಿವಾಸ್ ಪ್ರಸಾದ್(ನಿವೃತ್ತಿ ಘೋಷಿಸಿದ್ದರು), ಬಳ್ಳಾರಿ- ದೇವೇಂದ್ರಪ್ಪ.
ಉಳಿದ ಐದು ಕ್ಷೇತ್ರಗಳಲ್ಲಿ ಟಿಕೆಟ್ ಫೈಟ್:-
• ಚಿತ್ರದುರ್ಗ ಕ್ಷೇತ್ರದಲ್ಲಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಮತ್ತು ಮಾಜಿ ಸಂಸದ ಜನಾರ್ದನ ಸ್ವಾಮಿ ನಡುವೆ ಫೈಟ್
• ಬೆಳಗಾವಿ ಕ್ಷೇತ್ರದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಂಗಳಾ ಅಂಗಡಿ, ಮಹಾಂತೇಶ್ ಕವಟಗಿಮಠ, ರಮೇಶ್ ಕತ್ತಿ ನಡುವೆ ಫೈಟ್
• ಉತ್ತರ ಕನ್ನಡ ಕ್ಷೇತ್ರದಲ್ಲಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ, ವಿಶ್ಚೇಶ್ವರ ಹೆಗಡೆ ಕಾಗೇರಿ, ಗೋಪಾಲ್ ಹೆಸರು ಚರ್ಚೆ
• ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಡಾ. ಕೆ. ಸುಧಾಕರ್ ಮತ್ತು ಅಲೋಕ್ ವಿಶ್ವನಾಥ್ ನಡುವೆ ಫೈಟ್
• ರಾಯಚೂರು ಕ್ಷೇತ್ರದಲ್ಲಿ ಹಾಲಿ ಸಂಸದ ರಾಜಾ ಅಮರೇಶ ನಾಯಕ್ ಮತ್ತು ಬಿ.ವಿ. ನಾಯಕ್ ನಡುವೆ ಫೈಟ್.










