ಲೋಕಸಭೆಯಲ್ಲಿಂದು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ ಮಂಡಿಸಲಿರುವ ಸಚಿವೆ ನಿರ್ಮಲಾ ಸೀತಾರಾಮನ್.

28

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ ಬ್ಯಾಂಕಿಂಗ್ ಕಾನೂನುಗಳ ಮಸೂದೆ ಮಂಡಿಸಲಿದ್ದಾರೆ. ಬ್ಯಾಂಕಿಂಗ್ ನಿಯಂತ್ರಣ ಕಾಯಿದೆಯ ಜೊತೆಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾಯ್ದೆ-1934 ಅನ್ನೂ ಅವರು ಮಂಡಿಸುವರು. ಬ್ಯಾಂಕಿಂಗ್ ಕಾನೂನುಗಳು ಮಸೂದೆ-2024, ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆ-1934, ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ-1949, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾಯಿದೆ-1955, ಬ್ಯಾಂಕಿಂಗ್ ಕಂಪನಿಗಳ ಕಾಯಿದೆ-1970 ಮತ್ತು ಬ್ಯಾಂಕಿಂಗ್ ಕಂಪನಿಗಳು ಕಾಯಿದೆ-1980 ಮಂಡಿಸಲಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ರೈಲ್ವೆ ಮಸೂದೆ-2024 ಅನ್ನು ಮಂಡಿಸಲಿದ್ದಾರೆ. ರೈಲ್ವೆ ಕಾಯಿದೆ-1989ಕ್ಕೆ ತಿದ್ದುಪಡಿ ಜೊತೆಗೆ ರೈಲ್ವೇ ಮಂಡಳಿಯ ಅಧಿಕಾರಗಳನ್ನು ಹೆಚ್ಚಿಸಲು ಮತ್ತು ಕಾರ್ಯಾಚರಣೆ ದಕ್ಷತೆ ಸುಧಾರಣೆಯ ಗುರಿಯನ್ನು ಇದು ಹೊಂದಿದೆ. ಈ ಎರಡೂ ಮಸೂದೆಗಳ ಹೊರತಾಗಿ ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಸ್ತೆ, 2024-25ರ ಅವಧಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿಗಳೊಂದಿಗೆ ರಾಜ್ಯಸಭಾ ಸದಸ್ಯರ ಸೇರುಸುವಿಕೆಯ ಕುರಿತು ಪ್ರಸ್ತಾವವನ್ನು ಸದನದ ಮುಂದಿಡಲಿದ್ದಾರೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ತಿರುವನಂತಪುರದ ಶ್ರೀ ಚಿತ್ರ ತಿರುನಾಳ್ ವೈದ್ಯಕೀಯ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಗೆ ಇಬ್ಬರು ಸದಸ್ಯರ ಆಯ್ಕೆಗೆ ಪ್ರಸ್ತಾವನೆ ಮಂಡಿಸಲಿದ್ದಾರೆ.