ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ಉಸ್ತುವಾರಿಗಳು ಮತ್ತು ಸಹ ಉಸ್ತುವಾರಿಗಳನ್ನು ಬಿಜೆಪಿ ನೇಮಕ ಮಾಡಿದೆ.
ಈ ಸಂಬಂಧ ಬಿಜೆಪಿ ಹೈಕಮಾಂಡ್ ರಾಜ್ಯಾವಾರು ಉಸ್ತುವಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದ ಉಸ್ತುವಾರಿಯಾಗಿ ಸಂಸದ ಡಾ.ರಾಧ ಮೋಹನ್ ದಾಸ್ ಅಗ್ರವಾಲ್ ಮತ್ತು ಸಹ ಉಸ್ತುವಾರಿಯಾಗಿ ಸುಧಾಕರ್ ರೆಡ್ಡಿ ಅವರನ್ನ ನೇಮಕ ಮಾಡಿದೆ.
ಬೈಜಯಂತ್ ಪಾಂಡಾ ಉತ್ತರ ಪ್ರದೇಶದ ನೂತನ ಉಸ್ತುವಾರಿಯಾಗಲಿದ್ದಾರೆ. ಬಿಹಾರದ ಚುನಾವಣಾ ಉಸ್ತುವಾರಿಯಾಗಿ ವಿನೋದ್ ತಾವ್ಡೆ ಅವರನ್ನು ನೇಮಕ ಮಾಡಲಾಗಿದೆ. ವಿಜಯಪಾಲ್ ತೋಮರ್ ಅವರನ್ನು ಒಡಿಶಾ ಹಾಗೂ ಶ್ರೀಕಾಂತ್ ಶರ್ಮಾ ಅವರನ್ನು ಹಿಮಾಚಲದ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಕೇಂದ್ರದ ಮಾಜಿ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ದಕ್ಷಿಣ ರಾಜ್ಯ ಕೇರಳದ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ. ಹೀಗೆ ಒಟ್ಟು 23 ಮಂದಿಯನ್ನು ಉಸ್ತುವಾರಿ ಮತ್ತು ಸಹ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.










