ರಾಂಚಿ : ಜಾರ್ಖಂಡ್ ನಲ್ಲಿ ನಿರಂತರ ಲೋಡ್ ಶೆಡ್ಡಿಂಗ್‍ನಿಂದಾಗಿ ಸಾಮಾನ್ಯ ಜನರು ಮಾತ್ರವಲ್ಲದೇ ಶ್ರೀಮಂತರು ಕೂಡ ಸಮಸ್ಯೆಯನ್ನು ಎದುರಿಸುವಂತಾಗಿದೆ. ಇದೀಗ ವಿದ್ಯುತ್ ಸಮಸ್ಯೆಯಿಂದ ಕಂಗೆಟ್ಟಿರುವ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಪತ್ನಿ ಸಾಕ್ಷಿ ಧೋನಿ ಸಹ ಬೇಸರಗೊಂಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಾಕ್ಷಿ ಸಿಂಗ್ ಅವರು ಜಾರ್ಖಂಡ್ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದು, ಜಾರ್ಖಂಡ್ ನ ತೆರಿಗೆ ಪಾವತಿದಾಳಾಗಿರುವ ನನಗೆ ಜಾರ್ಖಂಡ್ ನಲ್ಲಿ ಇಷ್ಟು ವರ್ಷಗಳಿಂದ ವಿದ್ಯುತ್ ಸಮಸ್ಯೆ ಏಕೆ ಇದೆ ಎಂದು ತಿಳಿಯಲು ಬಯಸುತ್ತೇನೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ.
As a tax payer of Jharkhand just want to know why is there a power crisis in Jharkhand since so many years ? We are doing our part by consciously making sure we save energy !
— Sakshi Singh 🇮🇳❤️ (@SaakshiSRawat) April 25, 2022










