ಲೋನ್ ಕೊಡಿಸಲು ಡೇಟಿಂಗ್ ಬೇಡಿಕೆ ಆರೋಪ- ಫೈನಾನ್ಸ್ ಸಿಬ್ಬಂದಿಗೆ ಚಪ್ಪಲಿಯಿಂದ ಥಳಿಸಿದ ಮಹಿಳೆ…

62
firstsuddi

ಕೊಪ್ಪಳ: ಸಾಲ ವಸೂಲಿಗೆ ತೆರಳಿದ್ದ ಫೈನಾನ್ಸ್ ಸಿಬ್ಬಂದಿ ಮೇಲೆ ಮಹಿಳೆಯೊಬ್ಬಳು ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಆತನಿಗೆ ಚಪ್ಪಲಿಯಿಂದ ಥಳಿಸಿರುವ ಘಟನೆ ಜಿಲ್ಲೆಯ ಹಳೇಬಂಡಿಹರ್ಲಾಪುರ ಗ್ರಾಮದಲ್ಲಿ ನಡೆದಿದೆ.

ಮೈಕ್ರೋಫೈನಾನ್ಸ್ ಕಂಪನಿ ಒಂದರ ಮಹಿಳಾ ಗುಂಪಿನ ಸದಸ್ಯರಾಗಿರುವ ನಾಗಮ್ಮ ಎಂಬುವವರು ಸಾಲದ ಬೇಡಿಕೆ ಇಟ್ಟಿದ್ದರು. ಈ ವೇಳೆ ಸಾಲ ಪಡೆಯಲು, ಸಿಬ್ಬಂದಿ ಯಮನೂರಪ್ಪ ಎಂಬಾತ ಡೇಟಿಂಗ್‍ಗೆ ಸಹಕರಿಸುವಂತೆ ಬೇಡಿಕೆ ಇಟ್ಟಿದ್ದಾನೆ ಎನ್ನಲಾಗಿದೆ. ಬಳಿಕ ಸಾಲ ಮಂಜೂರಾಗಿದ್ದು, ಕರೆ ಮಾಡಿ ಅಶ್ಲೀಲ ಪದ ಬಳಸಿ ಮಾತಾಡಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ. ಇದೇ ಕಾರಣಕ್ಕೆ ಮಹಿಳೆ ಆತನಿಗೆ ಚಪ್ಪಲಿಯಿಂದ ಹೊಡೆದಿದ್ದಾಳೆ ಎನ್ನಲಾಗಿದೆ.

ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಇನ್ನೂ ಮೈಕ್ರೋ ಫೈನಾನ್ಸ್ ಕಂಪನಿಯ ಸಿಬ್ಬಂದಿಯ ಮೇಲೆ ನಾಗಮ್ಮ ಹಲ್ಲೆ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.