ಬೆಂಗಳೂರು: ವಾರಾಹಿ ವಲ್ರ್ಡ್ ಆಫ್ ಗೋಲ್ಡ್ ಶಾಪ್‍ನಲ್ಲಿ 14 ಕೆಜಿ 600 ಗ್ರಾಂನಷ್ಟು ಚಿನ್ನಾಭರಣ ಖರೀದಿಸಿ ವಂಚಿಸಿ ಬಂಧಿಸಲಾಗಿದ್ದ ಐಶ್ವರ್ಯಗೌಡ ಹಾಗೂ ಆಕೆಯ ಪತಿ ಹರೀಶ್ ಗೌಡಗೆ ಹೈಕೋರ್ಟ್ ಜಾಮೀನು ನೀಡಿದೆ. ವಂಚನೆ ಕೇಸ್‍ನಲ್ಲಿ ಚಂದ್ರಾ ಲೇಔಟ್ ಪೊಲೀಸರು ಆರೋಪಿಗಳನ್ನು ತನಿಖೆಗಾಗಿ ಕಸ್ಟಡಿಗೆ ಪಡೆದಿದ್ದರು. ಹೈಕೋರ್ಟ್ ಜಾಮೀನು ನೀಡಿದ ಕಾರಣ ಆರೋಪಿಗಳನ್ನು ನಿನ್ನೆ ರಾತ್ರಿ ಪೊಲೀಸ್ ಕಸ್ಟಡಿಯಿಂದ ಬಿಡುಗಡೆ ಮಾಡಲಾಗಿದೆ. ಆರೋಪಿ ಐಶ್ವರ್ಯ ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು 14.600 ಕೆಜಿಯಷ್ಟು ಚಿನ್ನಾಭರಣವನ್ನು ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳಿಗೆ ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 9ನೇ ಎಸಿಎಂಎಂ ಕೋರ್ಟ್ ಆದೇಶಿಸಿತ್ತು. ಅಲ್ಲಿಂದ ಪೊಲೀಸರು 2 ಮಂದಿ ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದರು. ಧಮೇಂದ್ರ ಕಾಂಗ್ರೆಸ್ ಮಾಜಿ ಸಂಸದ ಡಿ.ಕೆ ಸುರೇಶ್ ಧ್ವನಿಯಲ್ಲಿ ಫೋನ್ ಮಾಡಿದ್ದರು. ಧಮೇರ್ಂದ್ರ ಮಾಲೀಕರಾದ ವನಿತಾ ಐತಾಳ್‍ಗೆ ಫೋನ್ ಮಾಡಿ ಕೆಲದಿನಗಳ ಸಮಯ ಕೇಳಿದ್ದರು. ಕೊನೆಗೆ ತಾನೇ ಧಮೇರ್ಂದ್ರನನ್ನ ಕಳುಹಿಸಿ ಹತ್ಯೆ ಮಾಡಿಸುವುದಾಗಿಯೂ ಬೆದರಿಕೆ ಹಾಕಿದ್ದರು. ಅವಾಚ್ಯ ಪದಗಳಿಂದ ಬೈದು, ಜೀವ ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿತ್ತು. ಈ ಕುರಿತು ಜ್ಯುವೆಲರಿ ಮಾಲೀಕಾರದ ವನಿತಾ ಆರ್.ಆರ್ ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದು, ಆರ್.ಆರ್ ನಗರ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.










