ಬೆಂಗಳೂರು: ಭೋವಿ ನಿಗಮದಲ್ಲಿ ನಡೆದ ಅಕ್ರಮ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಎಸ್‍ಐಟಿ ರಚಿಸಿ ಕರ್ನಾಟಕ ಹೈಕೋರ್ಟ್‍ನ ಏಕಸದಸ್ಯ ಪೀಠ ಆದೇಶಿಸಿದೆ. ಅಲ್ಲದೇ ಮೂರು ತಿಂಗಳಲ್ಲಿ ವಿಚಾರಣೆ ಮುಗಿಸಿ ವರದಿ ನೀಡುವಂತೆ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಸೂಚನೆ ನೀಡಿದೆ. ಒಟ್ಟಾರೆ ಮೂವರು ಐಪಿಎಸ್ ಅಧಿಕಾರಿಗಳನ್ನು ಎಸ್‍ಐಟಿ ಹೊಂದಿರಲಿದೆ. ಈ ಪೈಕಿ ಇಬ್ಬರು ಎಸ್ಪಿಗಳಿದ್ದಾರೆ. ಉದ್ಯಮಿ ಹಾಗೂ ವಕೀಲೆ ಜೀವಾ ಆತ್ಮಹತ್ಯೆ ಪ್ರಕಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಅರ್ಜಿ ಸಲ್ಲಿಸಿತ್ತು. ಸಿಬಿಐ ತನಿಖೆ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಎಸ್‍ಐಟಿ ರಚಿಸಿ ಆದೇಶ ಹೊರಡಿಸಿತು. ಯತ್ನಾಳ್‍ಗೆ ಶ್ರೀರಾಮುಲು ಟಾಂಗ್ ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್‍ಪ್ರೆಸಸ್‍ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್‍ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿತ್ತು.










