ವಕ್ಫ್ ಇಲಾಖೆ ವಾಹನಗಳಿಗೆ ಪೆಟ್ರೋಲ್ ತುಂಬಿಸುವುದರಲ್ಲಿ ಭ್ರಷ್ಟಾಚಾರ.

33

ವಿಜಯಪುರ: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆಯಲ್ಲಿ ಮನಬಂದಂತೆ ಪೆಟ್ರೋಲ್ ಇಂಡೆಂಟ್‍ಗಳನ್ನು ಬಳಸಿಕೊಂಡು ಸರ್ಕಾರಿ ವಾಹನ ಚಾಲಕರು ಹಾಗೂ ಪೆಟ್ರೋಲ್ ಸರ್ವಿಸ್ ಸ್ಟೇಷನ್‍ಗಳು ದೊಡ್ಡ ಭ್ರಷ್ಟಾಚಾರವನ್ನು ಮಾಡುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪ ಮಾಡಿದ್ದಾರೆ. ಈ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು ಸರ್ಕಾರದ ಎಲ್ಲ ಇಲಾಖೆಗಳಿಗೂ ಇಂಧನ ಮಿತಿ ಮಾರ್ಗಸೂಚಿ ಹೊರಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ರಾಜ್ಯದ ತೆರಿಗೆ ಹಣವನ್ನು ಅತ್ಯಂತ ಜವಾಬ್ದಾರಿಯುತವಾಗಿ, ರಾಜ್ಯದ ಕಲ್ಯಾಣಕ್ಕೆ, ಉದ್ಯೋಗ ಸೃಜನೆ, ಬಡವರ, ರೈತರ ಶ್ರೇಯೋಭಿವೃದ್ಧಿ, ಅಭಿವೃದ್ಧಿ ಕಾರ್ಯಗಳಿಗೆ, ಮೂಲಸೌಕರ್ಯ ಅಭಿವೃದ್ಧಿಗೆ ಮಹಿಳಾ ಸಬಲೀಕರಣ ಉಪಯೋಗಿಸಬೇಕು. ಆದರೆ, ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆಯಲ್ಲಿ ಮನಬಂದಂತೆ ಪೆಟ್ರೋಲ್ ಇಂಡೆಂಟ್‍ಗಳನ್ನು ಬಳಸಿಕೊಂಡು ಸರ್ಕಾರಿ ವಾಹನ ಚಾಲಕರು ಹಾಗೂ ಪೆಟ್ರೋಲ್ ಸರ್ವಿಸ್ ಸ್ಟೇಷನ್‍ಗಳು ದೊಡ್ಡ ಭ್ರಷ್ಟಾಚಾರವನ್ನು ಮಾಡಿದ್ದಾರೆ. ಕಾರಿಗೆ ಪೆಟ್ರೋಲ್ ಹಾಕಿಸುವಾಗ ಸಂಬಂಧಪಟ್ಟ ಇಲಾಖೆಯ ಮೊಹರು ಇರಬೇಕು ಹಾಗೂ ಇಲಾಖೆಯ ಮುಖ್ಯಸ್ಥರ ಸಹಿ ಇರಬೇಕು. ಆದರೆ, ಅಲ್ಪಸಂಖ್ಯಾತ, ಹಜ್ ಮತ್ತು ವಕ್ಫ್ ಇಲಾಖೆಯ ಕಾರ್ಯದರ್ಶಿಗಳಾದ ಮನೋಜ್ ಕುಮಾರ್ ಅವರ ವಾಹನಗೆ ಇಂಡೆಂಟ್‍ಗಳು ಇಲ್ಲದಿದ್ದರೂ ಪೆಟ್ರೋಲ್ ತುಂಬಿಸಲಾಗಿದೆ ಎಂಬುದನ್ನು ಸುದ್ದಿಗಾರರು ಸಾಕ್ಷಿ ಸಮೇತ ಬಯಲು ಮಾಡಲಾಗಿದೆ. ಕೇವಲ 5 ತಿಂಗಳಲ್ಲಿ ಈ ವಾಹನಕ್ಕೆ 390 ಲೀಟರ್ ಪೆಟ್ರೋಲ್ ತುಂಬಿಸಲಾಗಿದೆ. ಚಾಲಕ ಮಹೇಶ್ ಎನ್ ಎಂಬುವವರು 2023 ಡಿಸೆಂಬರ್, 2024 ಜನವರಿ, ಫೆಬ್ರವರಿ, ಮಾರ್ಚ್ ಮತ್ತು ಮೇ ತಿಂಗಳ ಇಂಧನನಿಂದ ಬಿಲ್‍ಗಳಲ್ಲಿ ವ್ಯತ್ಯಯ ಆಗಿರುವುದು ತಿಳಿದಿದೆ ಎಂದು ಮಾಹಿತಿ ತಿಳಿದುಬಂದಿದೆ.