ವರದಕ್ಷಿಣೆಗಾಗಿ ಪತ್ನಿಗೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ ಪಾಪಿ ಪತಿ…

284
firstsuddi

ಮಂಡ್ಯ : ವರದಕ್ಷಿಣೆಗಾಗಿ ಪತಿಯೇ ತನ್ನ ಪತ್ನಿಯನ್ನು ಮನೆಯೊಳಗೆ ಕೂಡಿಹಾಕಿ ಬೆಂಕಿ ಹಚ್ಚಿರುವ ಅಮಾನವೀಯ ಘಟನೆ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬೆಳಕವಾಡಿ ಗ್ರಾಮದಲ್ಲಿ ನಡೆದಿದೆ. ಗೀತಾ ಪತಿಯ ಕೃತ್ಯದಿಂದ ಗಂಭೀರ ಗಾಯಗೊಂಡ ಮಹಿಳೆ ಹಾಗೂ ಮಹಾದೇವಸ್ವಾಮಿ ಈ ಕೃತ್ಯ ಎಸಗಿದ ಪಾಪಿ ಪತಿ. ಮಹಾದೇವಸ್ವಾಮಿ ಅವರು ಗೀತಾ ಅವರಿಗೆ ಪ್ರತಿದಿನ ತನ್ನ ತವರು ಮನೆಯಿಂದ ವರದಕ್ಷಿಣೆ ತರುವುದಾಗಿ ಪೀಡಿಸುತ್ತಿದ್ದರು ಎನ್ನಲಾಗಿದ್ದು, ಎಂದಿನಂತೆ ನಿನ್ನೆಯೂ ಕೂಡಾ ವರದಕ್ಷಿಣೆಗಾಗಿ ಪೀಡಿಸಿ ಬಳಿಕ ಪತ್ನಿಯನ್ನು ಮನೆಯಲ್ಲಿ ಕೂಡಿಹಾಕಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದು, ಘಟನೆಯಿಂದ ಗಂಭೀರ ಗಾಯಗೊಂಡ ಮಹಿಳೆಯನ್ನು ಗ್ರಾಮಸ್ಥರ ಸಹಾಯದಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ಬೆಳಕವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.