ವರಾಹ ರೂಪಂ ವಿವಾದ : ಕಾಂತಾರ ತಂಡಕ್ಕೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್…

52
firstsuddi

‘ಕಾಂತಾರ’ದ ವರಾಹ ರೂಪಂ ಹಾಡಿನ ಮೇಲೆ ಕೃತಿಚೌರ್ಯ ಆರೋಪ ಮಾಡಿದ್ದ ಕೇರಳದ ತೈಕ್ಕುಡಂ ಬ್ರಿಡ್ಜ್ ಆಲ್ಬಂ ಬ್ಯಾಂಡ್ ಗೆ ಸುಪ್ರೀಂಕೋರ್ಟ್ ನಲ್ಲೂ ಹಿನ್ನಡೆಯಾಗಿದೆ. ಹಾಡಿನ ಪ್ರಸಾರಕ್ಕೆ ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂಕೋರ್ಟ್ ತಡೆ ನೀಡಿದೆ.

ಕೇರಳ ಹೈಕೋರ್ಟ್ ನ ನ್ಯಾಯಮೂರ್ತಿ ಎ. ಬದ್ರುದೀನ್ ಅವರು ರಿಷಬ್ ಶೆಟ್ಟಿ ಹಾಗೂ ವಿಜಯ್ ಕಿರಗಂದೂರು ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ್ದರು. ‘ಕಾಪಿರೈಟ್ ಪ್ರಕರಣದಲ್ಲಿ ಸಿವಿಲ್ ಕೋರ್ಟ್ ನಿಂದ ಮಧ್ಯಂತರ ಅಥವಾ ಅಂತಿಮ ಆದೇಶ ಬರೋವರೆಗೆ ಕಾಂತಾರ ಸಿನಿಮಾದಲ್ಲಿ ‘ವರಾಹ ರೂಪಂ..’ ಹಾಡನ್ನು ಬಳಕೆ ಮಾಡುವಂತಿಲ್ಲ. ಈ ಪ್ರಕರಣದ ಮರು ವಿಚಾರಣೆಗೆ ಕೋರಲು ಅರ್ಜಿದಾರರಿಗೆ ಅವಕಾಶ ಇದೆ ಎಂದು ಬದ್ರುದೀನ್ ಹೇಳಿದ್ದರು.

ಕೇರಳ ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ಸುಪ್ರೀಂಕೋರ್ಟ್ ಸಡಿಲಿಸಿದೆ. ಸಿನಿಮಾ ತಂಡದವರು ಹಾಡನ್ನು ಬಳಕೆ ಮಾಡಬಹುದು. ವಿಚಾರಣೆಗೆ ಹಾಜರಾದಾಗ ನಿರ್ದೇಶಕರು ಹಾಗೂ ನಿರ್ಮಾಪಕರನ್ನು ಪೊಲೀಸರು ಪ್ರಶ್ನೆ ಕೇಳಬಹುದೇ ಹೊರತು ಅರೆಸ್ಟ್ ಮಾಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.