ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆಗೈದ ಭಯೋತ್ಪಾದಕರು.

56
firstsuddi

ಶ್ರೀನಗರ : ಜಮ್ಮು- ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ತೆಹಸಿಲ್ ಅಜಾಸ್ ನ ಸದುನಾರಾ ಗ್ರಾಮದಲ್ಲಿ ವಲಸೆ ಕಾರ್ಮಿಕನ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ.

ಮಧ್ಯರಾತ್ರಿಯಲ್ಲಿ ಭಯೋತ್ಪಾದಕರು ವಲಸೆ ಕಾರ್ಮಿಕ ಬಿಹಾರದ ಮಾಧೇಪುರದ ನಿವಾಸಿ ಮೊಹಮ್ಮದ್ ಅಮ್ರೇಜ್ ಗೆ ಗುಂಡು ಹಾರಿಸಿದ್ದಾರೆ. ಗುಂಡು ತಗುಲಿದ ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮೃತಪಟ್ಟಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ನಿನ್ನೆ ರಜೌರಿ ಜಿಲ್ಲೆಯ ಸೇನಾ ಶಿಬಿರದ ಮೇಲೆ ಗುಂಡಿನ ದಾಳಿ ನಡೆದಿತ್ತು. ಘಟನೆಯಲ್ಲಿ ನಾಲ್ವರು ಸೈನಿಕರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದರು. ಇದರ ಬೆನ್ನಲ್ಲೇ ಈ ಘಟನೆ ನಡೆದಿದೆ.