ನವದೆಹಲಿ : ಬಿಜೆಪಿ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮೊದಲ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಪ್ರಧಾನಿ, ರಾಷ್ಟ್ರಪತಿ, ಮತ್ತು ಗೃಹ ಸಚಿವ ದೆಹಲಿಯ ಸೈಯದ್ ಅಟಲ್ ಸ್ಮಾರಕಕ್ಕೆ ತೆರಳಿ ಗೌರವ ಸಲ್ಲಿಸಿದ್ದು, ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು ಕಳೆದ ವರ್ಷ ಆ.16ರಂದು ವಿಧಿವಶರಾಗಿದ್ದರು. ಇಂದು ವಾಜಪೇಯಿ ಅವರ ಮೊದಲನೇ ವರ್ಷದ ಪುಣ್ಯ ಸ್ಮರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಅಟಲ್ ಸೈಯದ್ ಸ್ಮಾರಕಕ್ಕೆ ಭೇಟಿ ನೀಡಿ ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದ್ದಾರೆ. ಈ ವೇಳೆ ಪುಣ್ಯ ಸ್ಮರಣೆಯಲ್ಲಿ ವಾಜಪೇಯಿ ಅವರ ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಹಾಗೂ ಮೊಮ್ಮಗಳು ನಿಹಾರಿಕ ಅವರು ಕೂಡಾ ಭಾಗಿಯಾಗಿದ್ದರು.










