ವಾಟರ್ ಟ್ರ್ಯಾಕ್ಟರ್ ಹರಿದು 4 ವರ್ಷದ ಬಾಲಕ ಸಾವು…

56
firstsuddi

ಬೆಂಗಳೂರು: ಕುಡಿದ ಮತ್ತಿನಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕನ ಮೇಲೆ ವಾಟರ್ ಟ್ರ್ಯಾಕ್ಟರ್ ಹರಿದು ನಾಲ್ಕು ವರ್ಷ ವಯಸ್ಸಿನ ಬಾಲಕ ಮೃತಪಟ್ಟ ದಾರುಣ ಘಟನೆ ಇಂದು ನಗರದ ಆನೇಕಲ್ ತಾಲೂಕಿನ ಸಿಕೆ ಪಾಳ್ಯ ಎಂಬಲ್ಲಿ ನಡೆದಿದೆ.

ಸಿಕೆ ಪಾಳ್ಯದ ನಿವಾಸಿ ಭುವನ್(4) ಮೃತ ಬಾಲಕ ಎಂದು ಗುರುತಿಸಲಾಗಿದೆ. ಅಣ್ಣನ ಜೊತೆ ಬೇಕರಿಯಲ್ಲಿ ಐಸ್ ಕ್ರೀಮ್ ತೆಗೆದುಕೊಂಡು ಬರುವಾಗ ಅಪಘಾತ ಸಂಭವಿಸಿದೆ. ಚಾಲಕ ಕುಡಿದ ಅಮಲಿನಲ್ಲಿ ವಾಟರ್ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದ ಎನ್ನಲಾಗಿದೆ. ವಾಟರ್ ಟ್ರ್ಯಾಕ್ಟರ್ ಭುವನ್ ತಲೆ ಮೇಲೆ ಹರಿದಿದ್ದು ಗಂಭೀರ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ, ಆಸ್ಪತ್ರೆ ತಲುಪುವಷ್ಟರಲ್ಲಿ ಗಾಯಾಳು ಬಾಲಕ ಮೃತಪಟ್ಟಿದ್ದಾನೆ. ಘಟನೆ ನಂತರ ವಾಟರ್ ಟ್ರ್ಯಾಕ್ಟರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಭುವನ್ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಘಟನಾ ಸ್ಥಳಕ್ಕೆ ಬನ್ನೇರುಘಟ್ಟ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.