ನವದೆಹಲಿ : ಕೇಂದ್ರ ಹಣಕಾಸು ಬಜೆಟ್ ಮಂಡನೆ ಬೆನ್ನಲ್ಲೇ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು ರಾಷ್ಟ್ರೀಯ ತೈಲ ಮಾರುಕಟ್ಟೆ ಕಂಪನಿಗಳು ಇಳಿಕೆ ಮಾಡಿವೆ.
19 ಕೆಜಿ ತೂಕದ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲಿ 91.50 ರೂಪಾಯಿಯಷ್ಟು ಇಳಿಕೆ ಮಾಡಲಾಗಿದೆ. ದರ ಇಳಿಕೆಯಿಂದಾಗಿ ದೆಹಲಿಯಲ್ಲಿ 19ಕೆಜಿ ಸಿಲಿಂಡರ್ ನ ಬೆಲೆ 1907 ರೂಪಾಯಿ ಆಗಲಿದೆ. ಜನವರಿಯಲ್ಲಿ ವಾಣಿಜ್ಯ ಸಿಲಿಂಡರ್ ನ ಬೆಲೆ 102 ರೂಪಾಯಿ ಇಳಿಕೆಯಾಗಿತ್ತು. ಇದೀಗ 91 ರೂಪಾಯಿ ಕಡಿತಗೊಳಿಸಲಾಗಿದೆ. ಆದರೆ 14.2 ಕೆಜಿ ತೂಕದ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.










