ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಭಾರೀ ಇಳಿಕೆ…

52
firstsuddi

ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಭಾರೀ ಇಳಿಕೆ ಕಂಡಿದೆ.

19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ  ಬೆಲೆ ಇಳಿಕೆಯಾಗಿದ್ದು ಗ್ರಾಹಕರಿಗೆ ಖುಷಿ ತಂದಿದೆ, ಸಿಲಿಂಡರ್ ಬೆಲೆ 83.50 ರೂ.ಗೆ ಇಳಿಕೆಯಾಗಿದೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 83 ರೂ. ನಷ್ಟು ಇಳಿಕೆಯಾಗಿದೆ. ಈ ಹೊಸ ದರ ಇಂದಿನಿಂದಲೇ ಜಾರಿಗೆ ಬರಲಿದೆ.

ಕಳೆದ ತಿಂಗಳು ಮೇ 1 ರಂದು ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 171.50 ರೂ. ಕಡಿತಗೊಳಿಸಲಾಗಿತ್ತು. ಅದಕ್ಕೂ ಮುನ್ನ ಏಪ್ರಿಲ್‌ನಲ್ಲಿ 91.50 ರೂ. ಕಡಿತಗೊಳಿಸಲಾಗಿತ್ತು. ಆದರೆ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಪರಿಷ್ಕರಣೆಯಾಗಿಲ್ಲ. 14.2 ಕೆಜಿ ತೂಕದ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ದರ ಕಳೆದ ತಿಂಗಳಿನಂತೆಯೇ ಇದೆ.

ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ 1,773 ರೂ.ಗೆ ಲಭ್ಯವಿದೆ. 1875.50 ರೂ.ಗೆ ಕೋಲ್ಕತ್ತಾದಲ್ಲಿ ಜೂನ್ 1 ರಿಂದ ಲಭ್ಯವಿದೆ. ಮುಂಬೈನಲ್ಲಿ 1,725 ರೂ., ಚೆನ್ನೈನಲ್ಲಿ ವಾಣಿಜ್ಯ ಸಿಲಿಂಡರ್ ಬೆಲೆ 1937ರೂ. ಆಗಿದೆ. ಕೋಲ್ಕತ್ತಾದಲ್ಲಿ 85 ರೂಪಾಯಿ, ಮುಂಬೈನಲ್ಲಿ 83.50 ರೂಪಾಯಿ ಮತ್ತು ಚೆನ್ನೈನಲ್ಲಿ 84.50 ರೂಪಾಯಿ ಸಿಲಿಂಡರ್ ಬೆಲೆ ಅಗ್ಗವಾಗಿದೆ.