ವಾಣಿಜ್ಯ ಬಳಕೆಯ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ ಇಳಿಕೆ…

83
firstsuddi

ನವದೆಹಲಿ : ವಾಣಿಜ್ಯ ಬಳಕೆಯ 19 ಕೆಜಿ ಎಲ್‍ಪಿಜಿ ಸಿಲಿಂಡರ್ ಬೆಲೆಯಲ್ಲಿ 36 ರೂಪಾಯಿ ಕಡಿತವಾಗಿದೆ. ಈ ದರ ಇಂದಿನಿಂದಲೇ ಜಾರಿಗೆ ಬರಲಿದೆ.

ಬೆಂಗಳೂರಿನಲ್ಲಿ ದರ ಪರಿಷ್ಕರಣೆಗೆ ಮೊದಲು 19 ಕೆಜಿ ಎಲ್ ಪಿಜಿ ಸಿಲಿಂಡರ್ ಬೆಲೆಯು 2,100ಕ್ಕೆ ಮಾರಾಟವಾಗುತ್ತಿತ್ತು. ಇದೀಗ 2,063.50ಗೆ ಮಾರಾಟವಾಗುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎಲ್ ಪಿಜಿ ಸಿಲಿಂಡರ್ ಬೆಲೆ 1976.50 ರೂ.ಗೆ ಆಗಿದೆ. ಈ ಹಿಂದೆ 2012.50 ರೂ. ಇತ್ತು. ಕೋಲ್ಕತ್ತಾದಲ್ಲಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆ 2095.50 ಇದೆ. ಈ ಹಿಂದೆ ಪ್ರತಿ ಸಿಲಿಂಡರ್ ಬೆಲೆ 2132 ರೂ. ಇತ್ತು. ಮುಂಬೈನಲ್ಲಿ 1936.50 ರೂ.ಗೆ 19 ಕೆಜಿ ತೂಕದ ಸಿಲಿಂಡರ್ ಸಿಗಲಿದೆ.

ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಕಡಿತದಿಂದ ರೆಸ್ಟೊರೆಂಟ್, ಹೊಟೆಲ್ ಮಾಲೀಕರಿಗೆ ಅನುಕೂಲವಾಗಲಿದೆ. ಆದರೆ ಗೃಹಬಳಕೆ ಸಿಲಿಂಡರ್ ಬೆಲೆ ಕಡಿತದ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ.