ನವದೆಹಲಿ : ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರದಲ್ಲಿ ಭಾರಿ ಇಳಿಕೆಯಾಗಿದೆ. ಇಂದಿನಿಂದ 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಲೆ 135 ರೂ. ಇಳಿಕೆಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆ.ಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ನ ಬೆಲೆ 2,354 ರೂ.ಗೆ ಇತ್ತು, ಆದರೆ ಈಗ 2,219 ರೂ.ಗೆ ಇಳಿಕೆಯಾಗಿದೆ.
ಕೋಲ್ಕತ್ತಾದಲ್ಲಿ 2,454 ರೂ. ಇದ್ದರೆ ಈಗ 2,322 ರೂ.ಗೆ ಇಳಿದಿದೆ. ಮುಂಬೈನಲ್ಲಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆ 2171.50, ಚೆನ್ನೈನಲ್ಲಿ 2,373 ರೂ.ಗೆ ಮಾರಾಟವಾಗುತ್ತಿದೆ. ಇಂದಿನಿಂದಲೇ ಈ ಪರಿಷ್ಕೃತ ಬೆಲೆ ಜಾರಿಯಾಗಲಿದೆ. ಆದರೆ ಗೃಹ ಬಳಕೆ ಸಿಲಿಂಡರ್ ನಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ.










