ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಹುಕ್ಕೇರಿಗೆ ಗೆಲುವು…

67
firstsuddi

ಬೆಳಗಾವಿ : ವಾಯವ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಹುಕ್ಕೇರಿ ಅವರು ಗೆದ್ದು ಬೀಗಿದ್ದಾರೆ. ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಇನ್ನು ಬಿಜೆಪಿ ಅಭ್ಯರ್ಥಿ ಅರುಣ್ ಶಹಾಪುರ್ ಗೆ ಸೋಲಾಗಿದೆ.

ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ಜೂನ್ 13ರಂದು ನಡೆದಿತ್ತು. ವಾಯವ್ಯ ಪದವೀಧರ, ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಿದ್ದವು. ವಾಯುವ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ 80, ಮತದಾನವಾಗಿತ್ತು.