ವಾಹನ ತಪಾಸಣೆ ವೇಳೆ ಡಿಕ್ಕಿ – ದ್ವಿಚಕ್ರ ವಾಹನ ಸವಾರ ಸಾವು…

93
firstsuddi

ಕಡಬ (ದ.ಕ) : ವಾಹನ ತಪಾಸಣೆಯ ವೇಳೆ ಗೂಡ್ಸ್ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪದ ಆತೂರು ಎಂಬಲ್ಲಿ ನಡೆದಿದೆ. ಮೃತ ಸವಾರನನ್ನು ಬೈಲು ಕೊಯಿಲ ಗ್ರಾಮದ ನಿವಾಸಿ ಎ.ಪಿ.ಹ್ಯಾರಿಸ್ (35) ಎಂದು ಗುರುತಿಸಲಾಗಿದೆ.

ಮೃತರು ತನ್ನ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಆತೂರು ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ವಾಹನವನ್ನು ತಡೆದಿದ್ದಾರೆ. ಈ ವೇಳೆ ದಾಖಲಾತಿ ತೆಗೆದುಕೊಂಡು ರಸ್ತೆ ದಾಟುವ ವೇಳೆ ಟಾಟಾ ಏಸ್ ಗೂಡ್ಸ್ ವಾಹನವು ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಉದ್ರಿಕ್ತ ಜನರನ್ನು ಸಮಾಧಾನ ಪಡಿಸಿದ್ದಾರೆ.