ವಾಹನ ಸವಾರರೇ ಗಮನಿಸಿ.. ನಿಮ್ಮ ವಾಹನಗಳ ಮೇಲಿರುವ ದಂಡ ಕಟ್ಟಿದ್ರೆ ಮಾತ್ರ ಇನ್ಶೂರೆನ್ಸ್…

81
firstsuddi

ಬೆಂಗಳೂರು : ರಾಜಧಾನಿಯಲ್ಲಿ ವಾಹನಗಳ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದಂತೆ ಸಂಚಾರಿ ನಿಯಮಗಳ ಉಲ್ಲಂಘನೆ ಪ್ರಕರಣಗಳ ಸಂಖ್ಯೆಯು ಹೆಚ್ಚಾಗುತ್ತಿದೆ. ಈ ಎಲ್ಲ ಸಮಸ್ಯೆಗೂ ಕಡಿವಾಣ ಹಾಕುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಾಸ್ಟರ್ ಪ್ಲ್ಯಾನ್ ಮಾಡಿದೆ.

ಇನ್ಮುಂದೆ ಟ್ರಾಫಿಕ್ ನಿಯಮ ಉಲ್ಲಂಘಿಸಿದ್ರೆ ಪ್ರತಿವರ್ಷ ವಿಮೆ ಮಾಡಿಸಲು ಹೋದಾಗ ಟ್ರಾಫಿಕ್ ಪೊಲೀಸರಿಂದ ಎನ್ ಓಸಿ ಕೊಡಬೇಕಾಗುತ್ತದೆ. ಎನ್ ಓಸಿ ಕೊಡದಿದ್ರೆ ಇನ್ಶೂರೆನ್ಸ್ ನವೀಕರಣ ಆಗದೇ ಇರುವಂತೆ ಮಾಡಲು ಪ್ಲ್ಯಾನ್ ಮಾಡಲಾಗಿದೆ. ದಂಡ ಪಾವತಿಸದೇ ಬಾಕಿಯಿದ್ದರೆ ಎಫ್‍ಸಿ ಹಾಗೂ ಇನ್ಶೂರೆನ್ಸ್ ನವೀಕರಣ ಪತ್ರ ನೀಡದಂತೆ ಸಾರಿಗೆ ಇಲಾಖೆ ಹಾಗೂ ವಿಮಾ ಕಂಪೆನಿಗಳ ಜೊತೆ ಪೊಲೀಸರು ಮಾತುಕತೆ ನಡೆಸುತ್ತಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಈ ಕಾರ್ಯ ಅನುಷ್ಠಾನಕ್ಕೆ ಬರಲಿದೆ.

ಬೆಂಗಳೂರಿನಲ್ಲಿ ಪ್ರತಿದಿನ ಸುಮಾರು 30 ಸಾವಿರಕ್ಕೂ ಹೆಚ್ಚು ಟ್ರಾಫಿಕ್ ಕೇಸ್ ಗಳು ದಾಖಲಾಗುತ್ತಿವೆ. ಕಳೆದ 11 ತಿಂಗಳಲ್ಲಿ ಬೆಂಗಳೂರಿನಲ್ಲಿ 96 ಲಕ್ಷ ಸಂಚಾರ ನಿಯಮ ಉಲ್ಲಂಘನೆ ಕೇಸ್ ದಾಖಲಾಗಿದೆ. 11 ತಿಂಗಳಲ್ಲಿ ಬರೋಬ್ಬರಿ 164 ಕೋಟಿ ರೂ. ದಂಡದ ಮೊತ್ತ ವಸೂಲಿ ಮಾಡಲಾಗಿದೆ. ವರ್ಷಾಂತ್ಯಕ್ಕೆ ಒಂದು ಕೋಟಿ ಕೇಸ್ ಆಗುತ್ತದೆ ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಬೆಂಗಳೂರು ನಗರ ಒಂದರಲ್ಲೇ ಇಷ್ಟು ಕೇಸ್ ದಾಖಲಾಗುತ್ತಿದೆ.