ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಈ ನಡುವೆ ವಿಕ್ಟೋರಿಯಾ ಆಸ್ಪತ್ರೆಯಿಂದ ಕೊರೊನಾ ಸೋಂಕಿತ ವ್ಯಕ್ತಿ ಎಲ್ಲರ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯ ಐಸೋಲೇಷನ್ ವಾರ್ಡ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ವ್ಯಕ್ತಿ ಇಂದು ಬೆಳಿಗ್ಗೆ 11:30ರ ಸುಮಾರಿಗೆ ಹೋಟೆಲ್‍ಗೆ ಹೋಗುವ ನೆಪ ಹೇಳಿ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ತೆರಳುತ್ತಿದ್ದ ವ್ಯಕ್ತಿಯನ್ನು ತಡೆಯಲು ಮುಂದಾದ ಪೊಲೀಸರನ್ನು ತಳ್ಳಿ ಪರಾರಿಯಾಗಿದ್ದು, ಇದರಿಂದ ನಗರದಲ್ಲಿ ಆತಂಕ ಹೆಚ್ಚಾಗಿದ್ದು, ಪರಾರಿಯಾಗಿರುವ ಸೋಂಕಿತ ವ್ಯಕ್ತಿಯನ್ನು ಹುಡುಕಿಕೊಡುವಂತೆ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮನವಿ ಮಾಡಿದ್ದು, ಪೊಲೀಸರು ಪರಾರಿಯಾದ ಸೋಂಕಿತ ವ್ಯಕ್ತಿಗಾಗಿ ಹುಡುಕಾಟ ನಡೆಸಲು ಆರಂಭಿಸಿದ್ದಾರೆ.










