ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳವನ್ನು ಪತ್ತೆ ಹಚ್ಚಿದ ನಾಸಾ…

218
firstsuddi

ವಾಷಿಂಗ್ಟನ್ : ಇಸ್ರೋದ ಮಹಾತ್ವಾಕಾಂಕ್ಷೆಯ ಯೋಜನೆಯಾಗಿದ್ದ ಚಂದ್ರಯಾನ-2ರ ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳವನ್ನು ನಾಸಾ ಪತ್ತೆ ಹಚ್ಚಿದ್ದು, ವಿಕ್ರಮ್ ಲ್ಯಾಂಡರ್ ಪತನವಾದ ಸ್ಥಳದ ಫೋಟೋವನ್ನು ನಾಸಾ ಟ್ವಿಟರ್ ಮೂಲಕ ಹಂಚಿಕೊಂಡಿದೆ. ಅಮೆರಿಕಾದ ನಾಸಾ ಸಂಸ್ಥೆ ಲೂನಾರ್ ರೆಕನೈಸನ್ಸ್ ಆರ್ಬಿಟರ್ ಮೂಲಕ ತೆಗೆದ ಚಿತ್ರವನ್ನು ಬಿಡುಗಡೆ ಮಾಡಿದ್ದು, ವಿಕ್ರಮ್ ಲ್ಯಾಂಡರ್ ಪತನಗೊಂಡ ಸ್ಥಳ ಹಾಗೂ ಅದರ ಅವಶೇಷಗಳನ್ನು ಪತ್ತೆ ಮಾಡಿದೆ. ಸೆ.7ರಂದು ಮಧ್ಯರಾತ್ರಿ 1:55ರ ಸುಮಾರಿಗೆ ಲ್ಯಾಂಡರ್ ಇನ್ನೇನು ಚಂದ್ರನ ಮೇಲ್ಮೈ ಮೇಲೆ ಇಳಿಯುವ ಕೊನೆ ಕ್ಷಣದಲ್ಲಿ ವಿಕ್ರಮ್ ಲ್ಯಾಂಡರ್ ತನ್ನ ಸಂಪರ್ಕವನ್ನು ಕಳೆದುಕೊಂಡಿತ್ತು.