ಹೈದರಾಬಾದ್ : ನಟಿ ಸಮಂತಾ ಹಾಗೂ ನಟ ನಾಗ ಚೈತನ್ಯ ಡಿವೋರ್ಸ್ ನೀಡಲಿದ್ದಾರೆ ಎಂಬ ಊಹಾಪೋಹಾಗಳಿಗೆ ಸ್ವತಃ ಅವರೆ ತೆರೆ ಎಳದಿದ್ದಾರೆ. ನಾಲ್ಕು ವರ್ಷಗಳ ತಮ್ಮ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಈ ವಿಚಾರವನ್ನ ಇಬ್ಬರೂ ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ನಾಗ ಚೈತನ್ಯ, ಬಹಳ ಆಲೋಚನೆ ಮಾಡಿದ ಬಳಿಕ ನಾನು ಮತ್ತು ಸ್ಯಾಮ್ (ಸಮಂತಾ) ಗಂಡ ಮತ್ತು ಹೆಂಡತಿಯಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ. ಒಂದು ದಶಕದ ಸ್ನೇಹವನ್ನು ಹೊಂದಲು ನಾವು ಅದೃಷ್ಟಶಾಲಿಯಾಗಿದ್ದೇವೆ. ನಮ್ಮ ಸಂಬಂಧ ಯಾವಾಗಲೂ ನಮ್ಮ ನಡುವೆ ವಿಶೇಷ ಬಾಂಧವ್ಯವನ್ನು ಹೊಂದಿರುತ್ತದೆ ಎಂದು ನಾವು ನಂಬುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮಗಳು ನಮ್ಮನ್ನು ಬೆಂಬಲಿಸಬೇಕು ಮತ್ತು ನಮಗೆ ಬೇಕಾದ ಖಾಸಗಿತನವನ್ನ ನಮಗೆ ನೀಡಬೇಕೆಂದು ನಾವು ವಿನಂತಿಸುತ್ತೇವೆ. ನಿಮ್ಮ ಬೆಂಬಲಕ್ಕೆ ಧನ್ಯವಾದಗಳು ಎಂದು ಹೇಳಿದ್ದಾರೆ.
2017 ರಲ್ಲಿ ಟಾಲಿವುಡ್ ನಟ ಅಕ್ಕಿನೇನಿ ನಾಗಾರ್ಜುನ ಪುತ್ರ ನಾಗ ಚೈತನ್ಯ ಜೊತೆ ಸಮಂತಾ ಸಪ್ತಪದಿ ತುಳಿದಿದ್ದರು.










