ವಿಜಯಪುರದಲ್ಲಿ 3.4ರ ತೀವ್ರತೆಯ ಭೂಕಂಪ…

62
firstsuddi

ವಿಜಯಪುರ: ಗುಮ್ಮಟ ನಗರಿ ವಿಜಯಪುರದಲ್ಲಿ ತಡರಾತ್ರಿ ಭೂಕಂಪನವಾಗಿದ್ದು, ಜನ ಆತಂಕಗೊಂಡಿದ್ದಾರೆ.

ಇಂದು ನಸುಕಿನ 1.38ರ ಸಮಯದಲ್ಲಿ 3.4 ರಷ್ಟು ತೀವ್ರತೆ ಹೊಂದಿದ್ದ ಭೂಕಂಪನ ಸಂಭವಿಸಿದೆ. ವಿಜಯಪುರ ನಗರ, ಐನಾಪುರ, ಕತಕನಹಳ್ಳಿ, ಹಿಟ್ನಳ್ಳಿ ಸೇರಿದಂತೆ ಸುತ್ತಲಿನ ಬಹುತೇಕ ಗ್ರಾಮಗಳಲ್ಲಿ ಭೂಕಂಪನದ ಅನುಭವ ಆಗಿದೆ. ವಿಜಯಪುರ ನಗರದ ಹೊರ ವಲಯದಲ್ಲಿರುವ ಐನಾಪುರ ಗ್ರಾಮದ ಪರಿಸರದ ಭೂಮಿಯ 5 ಕಿ.ಮೀ. ಆಳದಲ್ಲಿ ಭೂಕಂಪನದ ಬಿಂದು ಕೇಂದ್ರೀಕೃತವಾಗಿದೆ. ಭೂಕಂಪನ ಘಟನೆ ರಿಕ್ಟರ್ ಮಾಪನ ಕೇಂದ್ರದಲ್ಲಿ ದಾಖಲಾಗಿರುವುದನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರ (ಕೆ.ಎಸ್.ಎನ್.ಡಿ.ಎಂ.ಸಿ) ದೃಢಪಡಿಸಿದ್ದಾಗಿ ಜಿಲ್ಲಾಡಳಿತ ಖಚಿತಪಡಿಸಿದೆ.

ಲಘು ಕಂಪನದ ಪರಿಣಾಮ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ. ವಿಜಯಪುರ ಜಿಲ್ಲೆ ಕಪ್ಪು ಶಿಲೆಯಿಂದ ಆವೃತವಾಗಿದ್ದು, ಇದು ಕಡಿಮೆ ಮತ್ತು ಮಧ್ಯಮ ತೀವ್ರತೆಯುಳ್ಳ ವಲಯವಾಗಿದೆ. ಹೀಗಾಗಿ ಈ ರೀತಿಯ ಪ್ರದೇಶಗಳಲ್ಲಿನ ಭೂಕಂಪನಗಳು ಯಾವುದೇ ಹಾನಿ ಸೃಷ್ಟಿಸುವುದಿಲ್ಲವಾದ್ದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿರುವುದಿಲ್ಲ ಎಂದು ಭೂಕಂಪನ ತಜ್ಞರು ತಿಳಿಸಿದ್ದಾರೆ.