ಬೆಂಗಳೂರು : ಇಂದು ವಿಜಯ್ ದಿವಸ್ ಹಿನ್ನೆಲೆ ಸಿಎಂ ಯಡಿಯೂರಪ್ಪ ಅವರು ಯೋಧರಿಗೆ ಗೌರವವನ್ನು ಸಲ್ಲಿಸಿದ್ದಾರೆ. ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ನಡೆದ ಇಂದಿರಾಗಾಂಧಿ ಸಂಗೀತ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಭಾರತ ಸೇನೆಯ ಶಸ್ತ್ರಾಸ್ತ್ರ ಪಡೆಗಳು ನಮ್ಮ ಪ್ರಜಾಪ್ರಭುತ್ವ ಹಾಗೂ ಸಮಗ್ರತೆಯನ್ನು ಕಾಪಾಡುವ ಆಧಾರಸ್ತಂಭಗಳಾಗಿವೆ. ತ್ಯಾಗ, ಬಲಿದಾನಗಳನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ದೇಶದ ಭದ್ದ್ತತೆ, ಸುರಕ್ಷತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಹೆಚ್ಚಿನ ಪ್ರಾಧಾನ್ಯ ನೀಡಿದೆ ಎಂದು ಹೇಳಿದರು. ಈ ಕಾರ್ಯಕ್ರಮದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಯಾದ ವಿಜಯ್ ಭಾಸ್ಕರ್, ಡಿಜಿಪಿ ಪ್ರವೀಣ್ ಸೂದ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ನಿವೃತ ಸೈನಿಕರು ಹಾಗೂ ಕುಟುಂಬಸ್ಥರೂ ಸಹ ಭಾಗಿಯಾಗಿ ಹುತಾತ್ಮ ಯೋಧರಿಗೆ ಗೌರವವನ್ನು ಸಲ್ಲಿಸಿದ್ದಾರೆ.










