ವಿದೇಶಕ್ಕೆ ಹಾರಿದ ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ಮುಸ್ಕಾನ್.

52
firstsuddi

ಮಂಡ್ಯ : ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿ ಸುದ್ದಿಯಾಗಿದ್ದ ಮುಸ್ಕಾನ್ ಇದೀಗ ವಿದೇಶಕ್ಕೆ ತೆರಳಿದ್ದಾರೆ ಎಂದು ವರದಿಯಾಗಿದೆ.

ಹಿಜಾಬ್ ಪ್ರಕರಣದ ವೇಳೆ ಮುಸ್ಕಾನ್ ಅಲ್ಲಾಹು ಅಕ್ಬರ್ ಎಂದು ಕೂಗಿ ಭಾರೀ ಸುದ್ದಿಯಾಗಿದ್ದರು. ಈ ಹೇಳಿಕೆ ಹಿನ್ನೆಲೆ ಉಗ್ರ ಸಂಘಟನೆ ಮೆಚ್ಚುಗೆ ವ್ಯಕ್ತಪಡಿಸಿತ್ತು. ಇದರಿಂದ ಮುಸ್ಕಾನ್ ಬಗ್ಗೆ ಹೆಚ್ಚು ತನಿಖೆ ಮಾಡುವಂತೆ ಆಗ್ರಹ ಮಾಡಲಾಗಿತ್ತು. ಪರಿಣಾಮ ಪೊಲೀಸ್ ಇಲಾಖೆ ಮುಸ್ಕಾನ್ ಮತ್ತು ಕುಟುಂಬದವರನ್ನು ವಿಚಾರಣೆ ನಡೆಸಿತ್ತು. ಆದರೆ ಈ ಕುಟುಂಬ ಪೊಲೀಸರಿಗೆ ಯಾವುದೇ ಮಾಹಿತಿಯನ್ನು ನೀಡದೆ ಕಳೆದ ಏಪ್ರಿಲ್ 25 ರಂದೇ ಸೌದಿಗೆ ತೆರಳಿದೆ. ಇದೀಗ ಈ ಪ್ರವಾಸದ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಳ್ಳುತ್ತಿದೆ.

ಹಿಜಾಬ್ ವಿಚಾರದಲ್ಲಿ ಸರ್ಕಾರದ ಸಮವಸ್ತ್ರ ಸಂಹಿತೆಯನ್ನು ನ್ಯಾಯಾಲಯ ಎತ್ತಿಹಿಡಿದಿತ್ತು. ಇದಾದ ಬಳಿಕ ಮುಸ್ಕಾನ್ ಕಾಲೇಜಿಗೆ ಹಾಜರಾಗಿಲ್ಲ. ಅಲ್ಲದೇ ಪರೀಕ್ಷೆಗೂ ಕೂಡ ಗೈರಾಗಿದ್ದರು.