ಬೆಂಗಳೂರು : ಇಂದು ವಿದೇಶದಿಂದ ಬೆಂಗಳೂರಿಗೆ ಆಗಮಿಸಿದ ನಾಲ್ವರಿಗೆ ಕೋವಿಡ್ ಸೊಂಕು ದೃಢಪಟ್ಟಿದೆ.
ಕೀನ್ಯಾ ಮೂಲದ 59 ವರ್ಷದ ಪುರುಷ, 25 ವರ್ಷದ ಮಹಿಳೆ, ಅಮೆರಿಕ ಮೂಲದ 53 ವರ್ಷದ ಪುರುಷ ಮತ್ತು 15 ವರ್ಷದ ಬಾಲಕಿಗೆ ಸೋಂಕು ತಗುಲಿದೆ. ಕೆಂಪೇಗೌಡ ಏರ್ಪೋರ್ಟ್ ನಲ್ಲಿ ಆರ್ಟಿಪಿಸಿಆರ್ ಟೆಸ್ಟ್ ಮಾಡಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಸದ್ಯ ಸೋಂಕಿತರನ್ನು ನಗರದ ಬೌರಿಂಗ್ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ.










