ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ; ಬಸ್ ಪಾಸ್ ಅವಧಿ ವಿಸ್ತರಿಸಿದ ಕೆಎಸ್​ಆರ್​ಟಿಸಿ.

58
firstsuddi

ಬೆಂಗಳೂರು : ಪದವಿ, ವೃತ್ತಿಪರ ಕೋರ್ಸ್, ಕಾನೂನು ಹಾಗೂ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ ಕೆಎಸ್​ಆರ್​ಟಿಸಿ ಆದೇಶ ಹೊರಡಿಸಿದೆ.

ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 2022ರ ಆಗಸ್ಟ್, ಸೆಪ್ಟೆಂಬರ್, ನವೆಂಬರ್ ವರೆಗೂ ಪರೀಕ್ಷೆಗಳು ನಡೆಯಲಿದೆ. ಈ ಹಿನ್ನಲೆ ಬಸ್ ಪಾಸ್ ಅವಧಿ ವಿಸ್ತರಣೆಗೆ ಕೆಎಸ್​ಆರ್​ಟಿಸಿ ನಿರ್ಧರಿಸಿದೆ. ಆದರೆ ವಿದ್ಯಾರ್ಥಿಗಳು ಒಂದು ಅಥವಾ ಎರಡು ತಿಂಗಳ ಅವಧಿಗೆ ನಿಗದಿತ ಮೊತ್ತವನ್ನು ಪಾವತಿಸಿ ರಶೀದಿ ಪಡೆಯಬೇಕು. ಬಸ್ ಗಳಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳು ನಿರ್ವಾಹಕರು ಕೇಳಿದ ಸಂದರ್ಭದಲ್ಲಿ ಕಡ್ಡಾಯವಾಗಿ ರಶೀದಿ ಮತ್ತು ಹಳೆಯ ಪಾಸ್ ತೋರಿಸಬೇಕು.