ತುಮಕೂರು : ವಿದ್ಯಾರ್ಥಿಗಳ ತಾಯಂದಿರಿಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪದ ಮೇಲೆ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮಧುಗಿರಿ ತಾಲ್ಲೂಕಿನ ದೊಡ್ಡಹಟ್ಟಿಯಲ್ಲಿ ನಡೆದಿದೆ.
ಮಧುಗಿರಿ ತಾಲೂಕಿನ ದೊಡ್ಡಹಟ್ಟಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಅಮಾನತುಗೊಂಡ ಶಿಕ್ಷಕ. ಶಾಲೆಗೆ ಬರುತ್ತಿದ್ದ ವಿದ್ಯಾರ್ಥಿಗಳ ತಾಯಂದಿರ ನಂಬರ್ ಗಳನ್ನು ಪಡೆಯುತ್ತಿದ್ದ ಶಿಕ್ಷಕ ವಾಟ್ಸಪ್ ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತಿದ್ದ ಗ್ರಾಮದ ಮಹಿಳೆಯರು ಶಿಕ್ಷಕ ಸುರೇಶ್ ವಿರುದ್ದ ಡಿಡಿಪಿಐಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಅಧಿಕಾರಿಗಳು ತನಿಖೆ ನಡೆಸಿ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.










