ಮಂಗಳೂರು : ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಚುಂಬನ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳ ನಡುವೆ ಕಿಸ್ಸಿಂಗ್ ಪಂದ್ಯ ನಡೆದಿದೆ ಎಂದು ಹೇಳಲಾಗುತ್ತಿದೆ. ಪಂದ್ಯದ ನಿಯಮದಂತೇ ಎಲ್ಲರ ಎದುರೇ ಚುಂಬನ ಮಾಡಬೇಕು. ಓರ್ವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಪರಸ್ಪರ ಲಿಪ್ ಕಿಸ್ ಮಾಡುತ್ತಿದ್ದು, ಈ ದೃಶ್ಯವನ್ನು ಉಳಿದವರು ವೀಡಿಯೋ ಮಾಡಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಮಂಗಳೂರು ಪೊಲೀಸರು ಈ ವಿಡಿಯೋದ ಕುರಿತು ತನಿಖೆ ಆರಂಭಿಸಿದ್ದಾರೆ ಎಂದು ಹೇಳಲಾಗಿದೆ.










