ಪುತ್ತೂರು (ದ.ಕ) : ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕನೋರ್ವನನ್ನು ಪೊಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ.
ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ಅಕ್ಟೋಬರ್ 23 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಸಂತ್ರಸ್ತೆ ವಿದ್ಯಾರ್ಥಿನಿ ವಿದ್ಯಾಸಂಸ್ಥೆಗೆ ಸೇರಿದ ಹಾಸ್ಟೆಲ್ ನಲ್ಲಿ ಇದ್ದಳು. ವ್ಯಾಯಾಮ ಹೇಳುವ ನೆಪದಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ಶಿಕ್ಷಕನ ಕಿರುಕುಳದ ಬಗ್ಗೆ ವಿದ್ಯಾರ್ಥಿನಿ ಪೋಷಕರಿಗೆ ಮಾಹಿತಿ ನೀಡಿದ್ದಾಳೆ.
ಆಕೆಯ ಪೋಷಕರು ಅ.25ರರಂದು ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿದ್ಯಾರ್ಥಿನಿ ನೀಡಿದ ದೂರಿನಂತೆ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರನ್ನು ಬಂಧಿಸಿದ್ದಾರೆ.










