ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ – ಕೇರಳ ಸರ್ಕಾರದ ಮಹತ್ವದ ನಿರ್ಧಾರ…

48
firstsuddi

ತಿರುವನಂತಪುರಂ : ಸರ್ಕಾರದ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿನಿಯರಿಗೆ ಋತುಚಕ್ರದ ರಜೆ ನೀಡಿ ಕೇರಳ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 

ರಾಜ್ಯ ಉನ್ನತ ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ, ವಿದ್ಯಾರ್ಥಿಗಳಿಗಿರುವ 75% ಹಾಜರಾತಿಯನ್ನು ವಿದ್ಯಾರ್ಥಿನಿಯರಿಗಾಗಿ 73% ಇಳಿಕೆ ಮಾಡಿದೆ. ಇದಲ್ಲದೆ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ವಿದ್ಯಾರ್ಥಿನಿಯರು 60 ದಿನಗಳ ಗರ್ಭಧಾರಣೆಯ ರಜೆಯನ್ನು ಪಡೆಯಬಹುದು ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯ (CUSAT) ಜನವರಿ 14ರಂದು ವಿಶ್ವ ವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಮಾಸಿಕ ಋತು ಚಕ್ರದ ರಜೆ ಘೋಷಿಸಿತ್ತು. ಇದಾದ ನಂತರ ರಾಜ್ಯ ಸರ್ಕಾರ ಕೂಡ ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆ ನೀಡಲು ಮುಂದಾಗಿದೆ ಎಂದು ಉನ್ನತ ಶಿಕ್ಷಣ ಸಚಿವೆ ಆರ್.ಬಿಂದು ತಿಳಿಸಿದ್ದಾರೆ.

ಮುಟ್ಟಿನ ಸಮಯದಲ್ಲಿ ವಿದ್ಯಾರ್ಥಿನಿಯರು ಎದುರಿಸುವ ಮಾನಸಿಕ ಮತ್ತು ದೈಹಿಕ ತೊಂದರೆಗಳನ್ನು ಪರಿಗಣಿಸಿ, ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಮುಟ್ಟಿನ ರಜೆಯನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವೆ ಬಿಂದು ಪ್ರಕಟಣೆಯಲ್ಲಿಯೂ ತಿಳಿಸಿದ್ದಾರೆ.