ದಾವಣಗೆರೆ : ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆ ಶಿಕ್ಷಕನಿಗೆ ಸ್ಥಳೀಯರು ಗೂಸಾ ಕೊಟ್ಟಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಯರಗಟ್ಟೆಹಳ್ಳಿ ಗ್ರಾಮದಲ್ಲಿ ನಡೆದಿದೆ.
ಲೋಕೇಶ್ ಹೊದಿಗೆರೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಥಮಿಕ ಶಾಲೆ ಶಿಕ್ಷಕ. ಕೆಲ ದಿನಗಳಿಂದ ವಿದ್ಯಾರ್ಥಿಯರಿಗೆ ಶಿಕ್ಷಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ವಿಚಾರವನ್ನು ವಿದ್ಯಾರ್ಥಿನಿಯರು ಮನೆಯಲ್ಲಿ ಹೇಳಿದ ಹಿನ್ನೆಲೆ ಶಾಲೆಗೆ ಬಂದು ಆರೋಪಿ ಶಿಕ್ಷಕನಿಗೆ ಸ್ಥಳೀಯರು ಧರ್ಮದೇಟು ನೀಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.










