ಬೆಂಗಳೂರು : 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಾಲಾ-ಕಾಲೇಜು ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ನೀಡಿದ್ದು, ಉಚಿತ ಬಸ್ ಪಾಸ್ ಘೋಷಣೆ ಮಾಡಲಾಗಿದೆ.
ಮಕ್ಕಳ ಬಸ್ ಯೋಜನೆ ಪ್ರಾರಂಭಕ್ಕೆ ನಿರ್ಧಾರ ಮಾಡಲಾಗುತ್ತಿದೆ. ಇದಕ್ಕಾಗಿ 100 ಕೋಟಿ ವೆಚ್ಚದಲ್ಲಿ 1000 ಹೊಸ ಬಸ್ಗಳ ಕಾರ್ಯಾಚರಣೆ ನಡೆಯುತ್ತಿದೆ. ಇದರಿಂದ ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದರು.
ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಮುಖ್ಯಮಂತ್ರಿ ವಿದ್ಯಾ ಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಮೂಲಕ ಸರ್ಕಾರಿ ಪದವಿ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಓದುವ ವಿದ್ಯಾರ್ಥಿಗಳಿಂದ ಶುಲ್ಕವನ್ನು ತೆಗೆದುಕೊಳ್ಳದೆ, ಉಚಿತವಾಗಿ ಶಿಕ್ಷಣ ನೀಡಲಾಗುತ್ತದೆ. ಈ ಯೋಜನೆಯಿಂದ 8 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.










