ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋ ಚಿತ್ರೀಕರಣ – ವಿದ್ಯಾರ್ಥಿ ಅರೆಸ್ಟ್…

48
firstsuddi

ಬೆಂಗಳೂರು : ವಿದ್ಯಾರ್ಥಿನಿಯರ ಅರೆನಗ್ನ ವಿಡಿಯೋಗಳನ್ನು ಚಿತ್ರೀಕರಿಸುತ್ತಿದ್ದ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹೊಸಕೆರೆಹಳ್ಳಿ ಬಳಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿ ಶುಭಂ ಎಂ ಆಜಾದ್ ಎಂದು ಗುರುತಿಸಲಾಗಿದೆ.

ಬಿಬಿಎ ಐದನೇ ಸೆಮಿಸ್ಟರ್ ವಿದ್ಯಾರ್ಥಿಯಾಗಿರುವ ಶುಭಂ, ಶೌಚಾಲಯದಲ್ಲಿ ರಹಸ್ಯ ಕ್ಯಾಮೆರಾ ಫಿಕ್ಸ್ ಮಾಡಿದ್ದ. ಈಗಾಗಲೇ 1200ಕ್ಕೂ ಅಧಿಕ ವಿಡಿಯೋ ಹಾಗೂ ಫೋಟೋ ಚಿತ್ರೀಕರಿಸಿದ್ದಾನೆ. ಹಾಗೂ ಸ್ನೇಹಿತೆಯರು ಜೊತೆಯಲ್ಲಿದ್ದಾಗಲೂ ಅವರ ಅರೆನಗ್ನ ಫೋಟೋ ತೆಗೆದಿರುವ ಆರೋಪ ಕೇಳಿ ಬಂದಿದೆ.

ಇತ್ತೀಚೆಗೆ ಕಾಲೇಜು ಶೌಚಾಲಯದಲ್ಲಿ ಕ್ಯಾಮೆರಾ ಅಳವಡಿಸಲು ಹೋದಾಗ ಯುವತಿಯರು ಚೀರಾಡಿದ್ದಾರೆ. ಈ ವೇಳೆ ಆರೋಪಿ ವಿದ್ಯಾರ್ಥಿ ಪರಾರಿಯಾಗಿದ್ದಾನೆ. ಸಿಸಿಟಿವಿ ಪರಿಶೀಲನೆ ವೇಳೆ ಶುಭಂ ಕೃತ್ಯ ಬೆಳಕಿಗೆ ಬಂದಿದೆ. ಶುಭಂ, ಈ ಹಿಂದೆಯೂ ಇದೇ ರೀತಿ ಮಾಡಿ ಸಿಕ್ಕಿಬಿದ್ದು ಅಪಾಲಜಿ ಬರೆದುಕೊಟ್ಟಿದ್ದ.

ಇದೀಗ ಮತ್ತೆ ತನ್ನ ಚಾಳಿ ಮುಂದುವರಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತ ವಿದ್ಯಾರ್ಥಿಯ ಮೊಬೈಲ್ ನಲ್ಲಿ 1200 ಕ್ಕೂ ಅಧಿಕ ವಿಡಿಯೋ ಹಾಗೂ ಫೋಟೋಗಳು ಪತ್ತೆಯಾಗಿವೆ. ಆರೋಪಿ ಬಳಿ ಮತ್ತೊಂದು ಮೊಬೈಲ್ ಇದ್ದು ಅದರಲ್ಲಿ ಮತ್ತಷ್ಟು ವಿಡಿಯೋಗಳು ಪತ್ರೆಯಾಗುವ ಸಾಧ್ಯತೆ ಇದೆ. ಸದ್ಯ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿಯ ವಿಚಾರಣೆ ಮುಂದುವರೆದಿದೆ.