ಮೈಸೂರು : ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸಿದ ಮುಖ್ಯ ಶಿಕ್ಷಕನನ್ನು ಇದೀಗ ಸೇವೆಯಿಂದ ವಜಾ ಮಾಡಲಾಗಿದೆ.
ಜಿಲ್ಲೆಯ ಹೆಚ್ ಡಿ ಕೋಟೆ ತಾಲೂಕಿನ ಖಾಸಗಿ ಶಾಲೆಯ ಮುಖ್ಯ ಶಿಕ್ಷಕರಾದ ಆರ್ ಎಂ ಅನಿಲ್ಕುಮಾರ್ ಎಂಬುವವರು ವಿದ್ಯಾರ್ಥಿನಿಯ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದನ್ನು ಕೆಲ ವಿದ್ಯಾರ್ಥಿಗಳು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಕೂಡ ಆಗಿತ್ತು.
ಬಳಿಕ ಆರೋಪಿ ಶಿಕ್ಷಕನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಸಾರ್ವಜನಿಕರು ಶಿಕ್ಷಕನ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದರು. ಹೀಗಾಗಿ ಶಾಲೆಯ ಆಡಳಿತ ಮಂಡಳಿ ತುರ್ತು ಸಭೆಯನ್ನು ನಡೆಸಿ ಮುಖ್ಯಶಿಕ್ಷಕ ಆರ್ ಎಂ ಅನಿಲ್ಕುಮಾರ್ನನ್ನು ಸೇವೆಯಿಂದ ವಜಾಗೊಳಿಸಿದೆ.










