ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ-ಮೂವರು ಸ್ಥಳದಲ್ಲೇ ಸಾವು…

183
firstsuddi

ಶಿವಮೊಗ್ಗ : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊಸನಗರ ತಾಲ್ಲೂಕಿನ ಗರ್ತಿಕೆರೆ ಬಳಿ ನಡೆದಿದೆ. ಮೃತರನ್ನು ರಿಪ್ಪನ್ ಪೇಟೆ ಮೂಲದ ನಿವಾಸಿಗಳಾದ ಶಶಾಂಕ್(10), ಲೋಹಿತ್(36) ಹಾಗೂ ಕಲಾವತಿ(65) ಎಂದು ಗುರುತಿಸಲಾಗಿದೆ. ಮೃತರು ಕಾರಿನಲ್ಲಿ ಒಟ್ಟು 6 ಮಂದಿ ಕಳೆದ ಎರಡು ದಿನಗಳ ಹಿಂದೆ ಧರ್ಮಸ್ಥಳಕ್ಕೆ ತೆರಳಿದ್ದರು. ಇಂದು ಬೆಳಿಗ್ಗೆ ಧರ್ಮಸ್ಥಳದಿಂದ ವಾಪಸ್ಸಾಗುತ್ತಿದ್ದ ವೇಳೆ ಗರ್ತಿಕೆರೆ ಸಮೀಪ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನುಳಿದ ಮೂವರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದು, ಈ ಕುರಿತು ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.