ವಿದ್ಯುತ್ ತಂತಿ ತಗುಲಿ ಬೈಕ್ ನಲ್ಲಿದ್ದ ಇಬ್ಬರು ಸವಾರರು ಸ್ಥಳದಲ್ಲೇ ಸಾವು.

25

ಚಾಮರಾಜನಗರ: ಕಳೆದ ಒಂದು ವಾರದಿಂದ ಕರ್ನಾಟಕ ರಾಜ್ಯದಲ್ಲಿ ಸುರಿಯುತ್ತಿರುವ ಮಳೆ ರಾಜ್ಯದೇಲ್ಲಡೆ ಹಲವಾರು ಆವಾಂತರಗಳನ್ನು ಸೃಷ್ಠಿಸಿದೆ. ಚಾಮರಾಜ ಜಿಲ್ಲೆಯ ಅಯ್ಯನಕೆರೆ ಗ್ರಾಮದ ನಿವಾಸಿಗಳಾದ ನಾಗೇಂದ್ರ (48) ಮತ್ತು ಮಲ್ಲೇಶ್ (40) ಎಂಬುವವರು ನಿನ್ನೆ ರಾತ್ರಿ ತಮ್ಮ ಬೈಕ್ ನಲ್ಲಿ ಅಯ್ಯನಪುರ-ಹಿತ್ತಲಗುಡ್ಡೆ ರಸ್ತೆಯಲ್ಲಿ ತೆರಳುತ್ತಿದ್ದಾಗ, ಮಳೆ-ಗಾಳಿಯಿಂದ ವಿದ್ಯುತ್ ಕಂಬದ ಕೆಳಭಾಗದಲ್ಲಿ ಜೋತುಕೊಂಡಿದ್ದ ತಂತಿ ತಗುಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.
ಘಟನಾ ಸ್ಥಳಕ್ಕೆ ಪೂರ್ವ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿದ್ದು, ಇದುವರೆಗೆ ಇ ಘಟನೆಯ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ. ಆದರೇ ಚೆಸ್ಕಾಂ ವತಿಯಿಂದ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿ ಮೃತರ ಕುಟುಂಬದವರು ಹಾಗೂ ಸಂಬಂಧಿಕರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ ಎಂದು ಸ್ಥಳೀಯರೊಬ್ಬರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.