ವಿದ್ಯುತ್ ತಂತಿ ತಗುಲಿ ಯುವಕ ಸಾವು…

119
firstsuddi

ಬೆಂಗಳೂರು : ವಿದ್ಯುತ್ ತಂತಿ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಿಶೋರ್ ಮೃತ ದುರ್ದೈವಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್ ನಿನ್ನೆ ತಡರಾತ್ರಿ ತನ್ನ ಸಹೋದರನ ಜೊತೆ ಬರುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ. ಬಿಬಿಎಂಪಿ ಹಾಗೂ ಬೆಸ್ಕಾಂ ನಿರ್ಲಕ್ಷ್ಯಕ್ಕೆ ಕಿಶೋರ್ ಬಲಿಯಾಗಿದ್ದಾನೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಘಟನೆ ಸಂಬಂಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.