ವಿದ್ಯುತ್ ತಂತಿ ತುಳಿದು ಎಂಟು ವರ್ಷದ ಬಾಲಕಿ ಸಾವು…

128
firstsuddi

ಬೆಳಗಾವಿ: ಗದ್ದೆಯಲ್ಲಿ ತುಂಡಾಗಿ ಬಿದಿದ್ದ ವಿದ್ಯುತ್ ತಂತಿ ತುಳಿದು ಎಂಟು ವರ್ಷದ ಬಾಲಕಿ ಮೃತಪಟ್ಟ ಘಟನೆ ಗೋಕಾಕ್ ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಈ ಘಟನೆ ಜೂ.24ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ಚೂನವ್ವ ಸರ್ವಿ(8) ಮೃತ ಬಾಲಕಿ. ಪಕ್ಕದ ಮನೆಗ ಓದಲು ಹೋಗಿದ್ದ ಬಾಲಕಿ ವಾಪಸ್ ಮನೆಗೆ ಬರುವಾಗ ಕಬ್ಬಿನ ಗದ್ದೆಯಲ್ಲಿ ತುಂಡಾಗಿ ಬಿದಿದ್ದ ತಂತಿಯ ಮೇಲೆ ಕಾಲಿಟ್ಟ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ವಿದ್ಯುತ್ ತಂತಿ ತುಂಡರಿಸಿ ಬಿದ್ದು, ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಬಾಲಕಿ ಸಾವಿಗೆ ಕಾರಣರಾದ ಹೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಗೋಕಾಕ್ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.