ಕೊಪ್ಪಳ : ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಹಾಗೂ ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಚಳಗೇರಿ ಗ್ರಾಮದಲ್ಲಿ ನಡೆದಿದೆ. ಹನುಮಪ್ಪ ಬೀರಪ್ಪ(30) ಪ್ರಿಯಾಂಕ(4) ಹಾಗೂ ಬೀರಪ್ಪ(2) ಮೃತ ದುರ್ದೈವಿಗಳು ಎನ್ನಲಾಗಿದ್ದು, ಇಂದು ಬೆಳಿಗ್ಗೆ ಹನುಮಪ್ಪ ಅವರು ತಮ್ಮ ಮಕ್ಕಳನ್ನು ಕರೆದುಕೊಂಡು ಹೊಲದಲ್ಲಿ ಸೂರ್ಯಕಾಂತಿ ಬೀಜವನ್ನು ರಾಶಿ ಮಾಡಲು ತೆರಳುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಇಬ್ಬರು ಮಕ್ಕಳು ಹಾಗೂ ತಂದೆ ಸ್ಥಳದಲ್ಲೇ ಮೃತಪಟ್ಟಿದ್ದು, ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










