ವಿದ್ಯುತ್ ತಗುಲಿ ತಾಯಿ, ಮಗು ಸಾವು- ರಾಜ್ಯ ಸರ್ಕಾರಕ್ಕೆ ಎನ್‌ಎಚ್‌ಆರ್‌ಸಿ ನೋಟಿಸ್…

51
firstsuddi

ನವದೆಹಲಿ: ನಗರದ ವೈಟ್ ಫೀಲ್ಡ್ ಬಳಿ ಫುಟ್‌ಪಾತ್‌ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವಿದ್ಯುತ್ ತಗುಲಿ ತಾಯಿ, ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ನೋಟಿಸ್ ಜಾರಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳ ವರದಿ ಆಧರಿಸಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಎನ್‌ಎಚ್‌ಆರ್‌ಸಿ, ಘಟನೆ ಬಗ್ಗೆ ಮತ್ತು ತೆಗೆದುಕೊಂಡ ಕ್ರಮಗಳ ಬಗ್ಗೆ ಆರು ವಾರಗಳಲ್ಲಿ ವಿವರವಾದ ವರದಿ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹಾಗೂ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ನೀಡಿದೆ.

ವರದಿಯು ಎಫ್‌ಐಆರ್‌ನ ಸ್ಥಿತಿ, ಲೋಪಗಳಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ತೆಗೆದುಕೊಂಡ ಕ್ರಮ ಮತ್ತು ಮೃತರ ಮುಂದಿನ ಸಂಬಂಧಿಕರಿಗೆ ನೀಡಲಾದ ಪರಿಹಾರವನ್ನು ಒಳಗೊಂಡ ಮಾಹಿತಿಯೂ ಸೇರಿ ವಿಸ್ತೃತ ವರದಿಯನ್ನು ನೀಡಬೇಕು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹೇಳಿದೆ.