ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ಮೈಮೇಲೆ ಬಿದ್ದು ನರ್ಸ್ ಸಾವು…

36
firstsuddi

ತುಮಕೂರು: ವಿದ್ಯುತ್ ಪ್ರವಹಿಸುತ್ತಿದ್ದ ಕೇಬಲ್ ಮೈಮೇಲೆ ಬಿದ್ದ ಪರಿಣಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ನರ್ಸ್ ದಾರುಣವಾಗಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದಲ್ಲಿ ನಡೆದಿದೆ.

ಲಕ್ಷ್ಮೀ ಬಾಯಿ ಜಾದವ್ (36), ಮೃತ ದುರ್ದೈವಿ. ಇವರು ಕುಣಿಗಲ್ ತಾಲ್ಲೂಕಿನ ಇಪ್ಪಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಕುಣಿಗಲ್ ಪಟ್ಟಣದಲ್ಲಿ ವಾಸವಿದ್ದ ಲಕ್ಷ್ಮೀಬಾಯಿ, ಕೆಲಸ ಮುಗಿಸಿ ಇಪ್ಪಾಡಿಯಿಂದ ಕುಣಿಗಲ್ ಪಟ್ಟಣಕ್ಕೆ ಬೈಕ್​ನಲ್ಲಿ ಬರುವಾಗ ದಾರಿಯಲ್ಲಿ ಹಾದುಹೋಗಿದ್ದ ಕೇಬಲ್ ವೈರ್​ಗೆ ವಿದ್ಯುತ್ ತಂತಿ ತಗುಲಿ ಲಕ್ಷ್ಮೀಬಾಯಿ ಮೇಲೆ ಬಿದ್ದಿದೆ. ಕೇಬಲ್ ವೈರ್ ಬಿದ್ದ ಪರಿಣಾಮ ಲಕ್ಷ್ಮೀಬಾಯಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಇನ್ನು ಬೈಕ್ ಸವಾರ ಇಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಲಕ್ಣ್ಮಣ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕುಣಿಗಲ್ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇತ್ತ ಲಕ್ಷ್ಮೀ ಬಾಯಿ ಅವರ ಮೃತದೇಹವನ್ನ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ. ಕುಣಿಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.