ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಜೂನ್ 3ರಂದು ನಿಗಧಿಯಾಗಿದ್ದ ಚುನಾವಣೆಗೆ ಸ್ಪರ್ಧಿಸಿದ್ದ 7 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಚುನಾವಣಾಧಿಕಾರಿ ಎಂ.ಕೆ ವಿಶಾಲಾಕ್ಷಿ ಘೋಷಣೆ ಮಾಡಿದ್ದಾರೆ.
ಇಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿತ್ತು. ಏಳು ಸ್ಥಾನಗಳಿಗೆ ಏಳು ಜನರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಜೆಪಿಯಿಂದ ಲಕ್ಷ್ಮಣ ಸವದಿ, ಕೇಶವ ಪ್ರಸಾದ್, ಹೇಮಲತಾ ನಾಯಕ್ ಹಾಗೂ ಛಲವಾದಿ ನಾರಾಯಣಸ್ವಾಮಿ ಅವಿರೋಧ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ನಿಂದ ಅಬ್ದುಲ್ ಜಬ್ಬಾರ್, ಎಂ. ನಾಗರಾಜ್ ಯಾದವ್ ಮತ್ತು ಜೆಡಿಎಸ್ನಿಂದ ಟಿ.ಎ ಶರವಣ ಅವಿರೋಧ ಆಯ್ಕೆಯಾದ ಅಭ್ಯರ್ಥಿಗಳಾಗಿದ್ದಾರೆ.










